ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಯುವಕರ ಗುಂಪೊಂದು ಇಬ್ಬರು ಯುವಕರ ಮೇಲೆ ಹಲ್ಲೆ ನಡೆಸಿರುವ ಘಟನೆ ಉಣಕಲ್ ಹತ್ತಿರದ ಶೆಲ್ ಪೆಟ್ರೋಲ್ ಬಂಕ್ ಬಳಿ ನಡೆದಿದೆ.
ಬೈಕ್ಗೆ ಪೆಟ್ರೋಲ್ ಹಾಕಿಸಲು ಸಾಲಿನಲ್ಲಿ ನಿಂತಿದ್ದ ಸಂದರ್ಭದಲ್ಲಿ ಬೈಕ್ಗೆ ಬೈಕ್ ತಾಗಿದೆ ಎನ್ನಲಾಗಿದೆ. ಈ ಕಾರಣಕ್ಕೆ ಇಬ್ಬರು ಯುವಕರನ್ನು ಥಳಿಸಿದ್ದಾರೆ. ಈ ವೇಳೆ ಜಗಳ ಬಿಡಿಸಲು ಬಂದ ಸ್ಥಳೀಯರಿಗೂ ಅವಾಜ್ ಹಾಕಿದ್ದಾರೆ. ಆಗ ಸ್ಥಳೀಯರು ಪ್ರತಿರೋಧ ಒಡ್ಡಿದ್ದು, ಯುವಕರ ಗುಂಪು ಅಲ್ಲಿಂದ ತೆರಳಿದೆ.
ಇದನ್ನೂ ಓದಿ: ಮನೆ ಮುಂದೆ ದಿನಪತ್ರಿಕೆ ಇರುವ, ಕಸ ಗುಡಿಸದೆ, ರಂಗೋಲಿ ಬಿಡಿಸದ ಮನೆಗಳೇ ಇವರ ಟಾರ್ಗೆಟ್!
ಈ ಘಟನೆಯಿಂದಾಗಿ ಪೆಟ್ರೋಲ್ ಬಂಕ್ನಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಗಣೇಶ್ ಹಾಗೂ ನಾರಾಯಣ ಎಂಬ ಯುವಕರು ಹಲ್ಲೆಗೆ ಒಳಗಾಗಿದ್ದಾರೆ. ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.