ಹುಬ್ಬಳ್ಳಿ: ಜಮ್ಮು ಕಾಶ್ಮೀರದಲ್ಲಿ ಸಿಆರ್ಪಿಎಫ್ ಯೋಧನಾಗಿ ಸೇವೆ ಸಲ್ಲಿಸುತ್ತಿದ್ದ ಬರದ್ವಾಡದ ಗ್ರಾಮದ ಈಶ್ವರಪ್ಪ ಯಲ್ಲಪ್ಪ ಸೂರಣಗಿ ಅವರ ಅಂತ್ಯಕ್ರಿಯೆ ಸರ್ಕಾರಿ ಗೌರವಗಳೊಂದಿಗೆ ಸ್ವ ಗ್ರಾಮದಲ್ಲಿ ನೆರವೇರಿತು.
ಎರಡು ದಿನಗಳ ಹಿಂದೆ ಯೋಧ ಮೃತಪಟ್ಟ ಸುದ್ದಿಯನ್ನು ಕುಟುಂಬಕ್ಕೆ ತಿಳಿಸಲಾಗಿತ್ತು. ಇಂದು ಪಾರ್ಥಿವ ಶರೀರ ಸ್ವಗ್ರಾಮ ತಲುಪಿದೆ. ಯೋಧನ ಪಾರ್ಥಿವ ಶರೀರಕ್ಕೆ ಪಶುಪತಿಹಾಳ, ಹಿರೇಗುಂಜಳ ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಶಾಲಾ ಮಕ್ಕಳು ಸೇರಿದಂತೆ ರಾಜಕೀಯ ಮುಖಂಡರು ಅಂತಿಮ ನಮನ ಸಲ್ಲಿಸಿದರು.
ರೈತ ಮುಖಂಡ ಶಿವಾನಂದ ಬೆಂತೂರ, ಜಿಲ್ಲಾ ಕಾಂಗ್ರೆಸ್ ಮುಖಂಡ ಮುತ್ತಣ್ಣ ಶಿವಳ್ಳಿ, ಶಾಸಕಿ ಕುಸುಮಾವತಿ ಶಿವಳ್ಳಿ , ಜಿಲ್ಲಾ ಪಂಚಾಯಿತಿ ಸದಸ್ಯ ನಾಗನಗೌಡ ಪಾಟೀಲ.
ಜಿಲ್ಲಾ ಪಂಚಾಯತ ಸದಸ್ಯ ಉಮೇಶ್ ಹೆಬಸೂರು, ಮಾಜಿ ಶಾಸಕ ಎಸ್.ಐ.ಚಿಕ್ಕನಗೌಡ್ರ. ತಹಶೀಲ್ದಾರ ಬಸವರಾಜ ಮೆಳವಂಕಿ ಯೋಧನ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.