ETV Bharat / state

ಸುಳ್ಳು ಸಾಕ್ಷಿ ಹೇಳುವಂತೆ ಒತ್ತಡ, ವಿನಯ ಕುಲಕರ್ಣಿ ವಿರುದ್ಧ FIR - ಡಿವೈಎಸ್ಪಿ ತುಳಜಪ್ಪ ಸುಲ್ಪಿ

ಸುಳ್ಳು ಸಾಕ್ಷಿ ಹೇಳಲು ಸಾಕ್ಷಿಗಳಿಗೆ ಬೆದರಿಕೆ ಹಾಕಲಾಗಿದೆ ಎಂಬ ಆರೋಪದಡಿ ಮಾಜಿ ಸಚಿವ ವಿನಯ ಕುಲಕರ್ಣಿ, ಡಿವೈಎಸ್ಪಿ ತುಳಜಪ್ಪ ಸುಲ್ಪಿ ಹಾಗೂ ಚಂದ್ರಶೇಖರ್ ವಿರುದ್ಧ ಐಪಿಸಿ ಕಲಂ 195(A) ಅಡಿ ಎಫ್‌ಐಆರ್ ದಾಖಲಿಸಲಾಗಿದೆ.

ವಿನಯ ಕುಲಕರ್ಣಿ
author img

By

Published : Apr 10, 2019, 9:04 PM IST

ಧಾರವಾಡ : ಮಾಜಿ ಸಚಿವ ವಿನಯ ಕುಲಕರ್ಣಿ ಸೇರಿ ಇಬ್ಬರು ಅಧಿಕಾರಿಗಳ ಮೇಲೆ ಧಾರವಾಡದ ಉಪನಗರ ಠಾಣೆಯಲ್ಲಿ ಎಫ್.ಐ.ಆರ್​ ದಾಖಲಾಗಿದೆ.

ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್​ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸುಳ್ಳು ಸಾಕ್ಷಿ ಹೇಳಲು ಸಾಕ್ಷಿಗಳಿಗೆ ಬೆದರಿಕೆ ಹಾಕಲಾಗಿದೆ ಎಂದು ಮೃತ ಯೋಗೀಶ್ ಗೌಡ ಸಹೋದರ ಗುರುನಾಥ ಗೌಡ ಕೋರ್ಟ್ ಮೊರೆ ಹೋಗಿದ್ದರು. ಈ ಸಂಬಂಧ ಮಾಜಿ ಸಚಿವ ವಿನಯ ಕುಲಕರ್ಣಿ ಹಾಗೂ ಇಬ್ಬರು ಪೋಲಿಸ್ ಅಧಿಕಾರಿಗಳ ವಿರುದ್ಧ ಎಫ್​ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಧಾರವಾಡ ಜೆಎಮ್​ಎಫ್​ಸಿ ನ್ಯಾಯಾಲಯ ಆದೇಶ ಹೊರಡಿಸಿತ್ತು.

ಈ ಹಿನ್ನೆಲೆಯಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ, ಡಿವೈಎಸ್ಪಿ ತುಳಜಪ್ಪ ಸುಲ್ಪಿ ಹಾಗೂ ಚಂದ್ರಶೇಖರ್ ಮೇಲೆ ವಿರುದ್ಧ ಐಪಿಸಿ 195(A) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

Intro:Body:Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.