ಧಾರವಾಡ: ಶಾಲಾ ಮಕ್ಕಳನ್ನು ಮನೆಗೆ ಬಿಡಲು ಹೊರಟಿದ್ದ ಖಾಸಗಿ ಓಮ್ನಿ ಕಾರ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಗರದ ಓಲ್ಡ್ ಡಿಎಸ್ಪಿ ಸರ್ಕಲ್ ಬಳಿ ಸಂಭವಿಸಿದೆ.
ಖಾಸಗಿ ಶಾಲೆಯೊಂದರ ಮಕ್ಕಳನ್ನು ಎಂದಿನಂತೆ ಮನೆಗೆ ಕರೆದುಕೊಂಡು ಹೋಗುವಾಗ ದಿಢೀರ್ನೇ ಕಾರಿನ ಮುಂಭಾಗದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಎಚ್ಚೆತ್ತುಗೊಂಡ ಚಾಲಕ ವಾಹನವನ್ನು ರಸ್ತೆ ಬದಿಗೆ ನಿಲ್ಲಿಸಿ, ಮಕ್ಕಳನ್ನು ಕೆಳಗೆ ಇಳಿಸಿದ್ದು, ಕೂಡಲೇ ಬೆಂಕಿ ನಂದಿಸಿದ್ದರಿಂದ ಭಾರಿ ಅನಾಹುತ ತಪ್ಪಿದೆ.