ETV Bharat / state

ಶಾರ್ಟ್​ ಸರ್ಕ್ಯೂಟ್​ನಿಂದ ಹೊತ್ತಿ ಉರಿದ 2 ಮನೆ : ಬೀದಿಗೆ ಬಂದ ಕುಟುಂಬಗಳು - Hubli fire incident news

ಶಾರ್ಟ್ ಸರ್ಕ್ಯೂಟ್​ನಿಂದ ಎರಡು ಮನೆಗಳು ಬೆಂಕಿಗೆ ಆಹುತಿಯಾಗಿದ್ದು, ಕುಟುಂಬಗಳು ಬೀದಿಗೆ ಬಂದಿವೆ. ಈ ಘಟನೆ ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮದಲ್ಲಿ ನಡೆದಿದೆ.

Hubli
ಶಾರ್ಟ್​ ಸರ್ಕ್ಯೂಟ್​ನಿಂದ ಹೊತ್ತಿ ಉರಿದ ಮನೆ
author img

By

Published : Jan 17, 2021, 12:55 PM IST

ಹುಬ್ಬಳ್ಳಿ: ಶಾರ್ಟ್ ಸರ್ಕ್ಯೂಟ್​ನಿಂದ ಎರಡು ಮನೆಗಳು ಬೆಂಕಿಗೆ ಆಹುತಿಯಾದ ಘಟನೆ ತಾಲೂಕಿನ ಸುಳ್ಳ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಶಿವಬಸಪ್ಪ ವಾಲಿ ಮತ್ತು ಕಲ್ಲಪ್ಪ ವಾಲಿ ಎಂಬುವರ ಮನೆಯಲ್ಲಿ ಈ ಅವಘಡ ಸಂಭವಿಸಿದ್ದು, ತಡರಾತ್ರಿ ಮನೆಯಲ್ಲಿ ದಟ್ಟವಾದ ಹೊಗೆ ಕಾಣಿಸಿಕೊಂಡಿದೆ. ಮನೆಯಲ್ಲಿದ್ದ ಸದಸ್ಯರು ಮಲಗಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ.

ಶಾರ್ಟ್​ ಸರ್ಕ್ಯೂಟ್​ನಿಂದ ಹೊತ್ತಿ ಉರಿದ ಮನೆಗಳು

ಘಟನೆ ಸಂಭವಿಸಿದ ಕೂಡಲೇ ಗ್ರಾಮಸ್ಥರು ಮನೆಯಲ್ಲಿದ್ದವರನ್ನು ರಕ್ಷಣೆ ಮಾಡಿದ್ದಾರೆ. ನಂತರ ಬೆಂಕಿ ನಂದಿಸುವಷ್ಟರಲ್ಲಿಯೇ ಮನೆಗಳಿಗೆ ಬೆಂಕಿ ಆವರಿಸಿಕೊಂಡು ಸುಟ್ಟು ಕರಕಲಾಗಿವೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ನಿಯಂತ್ರಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.