ಧಾರವಾಡ: ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಮಾವಿನ ತೋಟ ಬೆಂಕಿಗಾಹುತಿಯಾದ ಘಟನೆ ಧಾರವಾಡ ತಾಲೂಕಿನ ವೆಂಕಟಾಪೂರ ಗ್ರಾಮದಲ್ಲಿ ನಡೆದಿದೆ.
ಹಟೇಲ್ ಸಾಬ ಹಸನಸಾಬ ಮಾಮಲೆದಿ ಎಂಬುವವರಿಗೆ ಸೇರಿದ 16 ಎಕರೆ ಮಾವಿನ ತೋಟಕ್ಕೆ ಶನಿವಾರ ಮಧ್ಯಾಹ್ನ ಬೆಂಕಿ ಬಿದ್ದು, ಸಂಪೂರ್ಣವಾಗಿ ಸುಟ್ಟು ಹೋಗಿದೆ.
ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ರೈತ ಇದೀಗ ಕಣ್ಣೀರಲ್ಲಿ ಕೈತೊಳೆಯುವಂತಾಗಿದೆ.