ETV Bharat / state

ಹುಬ್ಬಳ್ಳಿ: ಪ್ರವಾಹದಲ್ಲಿ ಸಿಲುಕಿದ್ದ ರೈತನ ರಕ್ಷಿಸಿದ ಅಗ್ನಿಶಾಮಕ ತಂಡ - ಪ್ರವಾಹದಲ್ಲಿ ಸಿಲುಕಿದ್ದ ರೈತನನ್ನು ರಕ್ಷಿಸಿದ ಅಗ್ನಿಶಾಮಕ ತಂಡ

ನವಲಗುಂದ ತಾಲೂಕಿನ ಸೊಟಕನಾಳ ಎಂಬಲ್ಲಿ ಪ್ರವಾಹದಲ್ಲಿ ಸಿಲುಕಿಕೊಂಡಿದ್ದ ರೈತನನ್ನು ಅಗ್ನಿಶಾಮಕ ಹಾಗೂ ತುರ್ತು‌ಸೇವೆಗಳ ಇಲಾಖೆ ಸಿಬ್ಬಂದಿ ವಿಶೇಷ ಕಾರ್ಯಾಚರಣೆ ಮೂಲಕ ರಕ್ಷಿಸಿದ್ದಾರೆ.

Firefighters rescue the farmer
ಪ್ರವಾಹದಲ್ಲಿ ಸಿಲುಕಿದ್ದ ರೈತನನ್ನು ರಕ್ಷಿಸಿದ ಅಗ್ನಿಶಾಮಕ ತಂಡ
author img

By

Published : Oct 22, 2020, 11:14 AM IST

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಎಲ್ಲೆಡೆ ಆತಂಕದ ಸ್ಥಿತಿ ನಿರ್ಮಾಣವಾಗಿದೆ. ನವಲಗುಂದ ತಾಲೂಕಿನ ಸೊಟಕನಾಳದಲ್ಲಿ ಪ್ರವಾಹದಲ್ಲಿ ಸಿಲುಕಿಕೊಂಡಿದ್ದ ರೈತನನ್ನು ಅಗ್ನಿಶಾಮಕ ಹಾಗೂ ತುರ್ತು‌ಸೇವೆಗಳ ಇಲಾಖೆ ಕಾರ್ಯಾಚರಣೆ ಮೂಲಕ ರಕ್ಷಣೆ ಮಾಡಿದ್ದಾರೆ.

ಪ್ರವಾಹದಲ್ಲಿ ಸಿಲುಕಿದ್ದ ರೈತನನ್ನು ರಕ್ಷಿಸಿದ ಅಗ್ನಿಶಾಮಕ ತಂಡ

ಸಂಜೆ ಸಮಯದಲ್ಲಿ ಹೊಲಕ್ಕೆ ಹೋಗಿದ್ದ ವ್ಯಕ್ತಿ ಪ್ರವಾಹದಲ್ಲಿ ಸಿಲುಕಿಕೊಂಡಿದ್ದ. ಈ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಅಗ್ನಿಶಾಮಕ ತಂಡ ತಡರಾತ್ರಿಯವರೆಗೂ ಕಾರ್ಯಾಚರಣೆ ನಡೆಸಿ ರೈತನ ಪ್ರಾಣ ರಕ್ಷಣೆ ಮಾಡಿದೆ.

ಡಿಎಫ್ಒ ವಿನಾಯಕ ಕಲುಟಕರ ನೇತೃತ್ವದ ತಂಡದ ಕಾರ್ಯಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.