ETV Bharat / state

ಹೆಸ್ಕಾಂನಲ್ಲಿ 51 ಕೋಟಿ ರೂ. ವಂಚನೆ: ಮಧ್ಯಂತರ ವರದಿ ಸಲ್ಲಿಕೆ; ಐವರು ಸಿಬ್ಬಂದಿ ಅಮಾನತು... - hubli hescom employees suspended

ಹೆಸ್ಕಾಂ ಉಗ್ರಾಣದಲ್ಲಿ ಕೋಟ್ಯಂತರ ರೂ ಅವ್ಯವಹಾರ ನಡೆದ ಹಿನ್ನೆಲೆಯಲ್ಲಿ ಐವರು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.

ಹೆಸ್ಕಾಂ ಐವರು ಸಿಬ್ಬಂದಿ ಅಮಾನತು
ಹೆಸ್ಕಾಂ ಐವರು ಸಿಬ್ಬಂದಿ ಅಮಾನತು
author img

By ETV Bharat Karnataka Team

Published : Dec 21, 2023, 12:59 PM IST

ಹುಬ್ಬಳ್ಳಿ: ಹೆಸ್ಕಾಂನ ಹುಬ್ಬಳ್ಳಿಯ ಉಗ್ರಾಣದಲ್ಲಿ ನಡೆದ 51 ಕೋಟಿ ರೂ. ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಸ್ಕಾಂನ ಲೆಕ್ಕಾಧಿಕಾರಿ ಸೇರಿದಂತೆ ಐವರನ್ನು ಅಮಾನತು ಮಾಡಲಾಗಿದೆ. ಲೆಕ್ಕಾಧಿಕಾರಿ ಬೆಂಜಮಿನ್ ಮಸ್ಕನರ್ಸ್, ಸಹಾಯಕ ಲೆಕ್ಕಾಧಿಕಾರಿ ಯು.ಎಸ್.ಉಳ್ಳಾಗಡ್ಡಿ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ಗಳಾದ ವಿಶ್ವನಾಥ ಶಿರಹಟ್ಟಿಮಠ, ವಸಂತಕುಮಾರ ರಾಠೋಡ, ಅಂಜಿನಪ್ಪ ಬಿ, ಅಮಾನತುಗೊಂಡವರು.

ಅವ್ಯವಹಾರದ ಕುರಿತು ತನಿಖೆ ನೆಡೆಸಲು ಐವರು ಅಧಿಕಾರಿಗಳ ತಂಡ ರಚಿಸಲಾಗಿತ್ತು. ತಂಡ ಮೂರು ವರ್ಷ ತನಿಖೆ ನಡೆಸಿ, ಮಧ್ಯಂತರ ವರದಿ ಸಲ್ಲಿಸಿದ್ದು, ಅದರನ್ವಯ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಮದ್ ರೋಷನ್ ಐವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.

ಏನಿದು ಪ್ರಕರಣ?: ಬಸವರಾಜ್ ಮರಳಿಮಠ ಅವರು 2007 ರಿಂದ 2023ರ ಜುಲೈ 31 ರವರೆಗೆ ಹೆಸ್ಕಾಂ‌ನ ಕಾರ್ಯ ಮತ್ತು ಪಾಲನೆ ನಗರದ ವಿಭಾಗ ಮತ್ತು 2014 ರಿಂದ 2023 ಜುಲೈ 31ರವರೆಗೆ ಗ್ರಾಮೀಣ ವಿಭಾಗದ ಹುಬ್ಬಳ್ಳಿಯ ಉಗ್ರಾಣದಲ್ಲಿ ಉಗ್ರಾಣ ಪಾಲಕರಾಗಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದಾರೆ. ಈ ಅವಧಿಯಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ಹೆಸ್ಕಾಂಗೆ ದೂರು ಸಲ್ಲಿಕೆಯಾಗಿತ್ತು.

ಬಸವರಾಜ ಮಳಿಮಠ ಅವರು ನಾಲ್ಕು ಪ್ರತ್ಯೇಕ ಪ್ರಕರಣಗಳಲ್ಲಿ 51,69,49,054 ಮೌಲ್ಯದ ಸಾಮಗ್ರಿಗಳನ್ನು ದುರುಪಯೋಗ ಪಡಿಸಿಕೊಂಡು, ಕಂಪನಿಗೆ ಆರ್ಥಿಕ ನಷ್ಟ ಉಂಟು ಮಾಡಿದ್ದಾರೆ ಎಂದು ತನಿಖಾ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಅಮಾನತುಗೊಂಡಿರುವವರು ತಮ್ಮ ಅವಧಿಯಲ್ಲಿ ಹುಬ್ಬಳ್ಳಿ ನಗರ ವಿಭಾಗದ ಉಗ್ರಾಣದಿಂದ ಗ್ರಾಮೀಣ ವಿಭಾಗದ ಉಗ್ರಾಣಕ್ಕೆ ಭೌತಿಕವಾಗಿ ಸಾಮಗ್ರಿಗಳನ್ನು ವರ್ಗಾಯಿಸದೇ ಸಾಮಗ್ರಿಗಳನ್ನು ಮತ್ತು ಅದರ ಮೊತ್ತದಷ್ಟು ಸರಕು ಪಟ್ಟಿ, ಸುಳ್ಳು ದಾಖಲೆ ಸೃಷ್ಟಿಸಿ ಅದರ ಮೊತ್ತವನ್ನು ದುರುಪಯೋಪಡಿಸಿಕೊಂಡು, ಅವ್ಯವಹಾರದಲ್ಲಿ ಭಾಗಿಯಾಗಿ ಕರ್ತವ್ಯಲೋಪ ಎಸಗಿದ್ದಾರೆ ಎಂದು ತಿಳಿಸಲಾಗಿದೆ.

ಹಿಂದಿನ ಘಟನೆ, ಬೆಸ್ಕಾಂನ ಐವರು ಅಮಾನತು: ಕಳೆದ ತಿಂಗಳು ಬೆಂಗಳೂರಿನ್ ವೈಟ್‌ ಫೀಲ್ಡ್‌ ವಿಭಾಗ ವ್ಯಾಪ್ತಿಯ ಕಾಡುಗೋಡಿಯ ಸಮೀಪ ರಸ್ತೆ ಮೇಲೆ ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ಪಾದಚಾರಿ ತಾಯಿ ಮತ್ತು ಮಗಳು ಮೃತಪಟ್ಟಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಕರ್ತವ್ಯಲೋಪ ಕಂಡ ಬಂದ ಹಿನ್ನೆಲೆಯಲ್ಲಿ ಬೆಸ್ಕಾಂನ ಐವರು ಸಿಬ್ಬಂದಿಯನ್ನು ಅಮಾನತುಗೊಳಿಸಿ, ಇಬ್ಬರು ಹಿರಿಯ ಅಧಿಕಾರಿಗಳಿಗೆ ಕಾರಣ ಕೇಳಿ ಶೋಕಾಸ್‌ ನೊಟೀಸ್‌ ಜಾರಿಗೊಳಿಸಲಾಗಿತ್ತು.

ಈ ವಿದ್ಯುತ್‌ ಅಪಘಾತವನ್ನು ಗಂಭೀರವಾಗಿ ಪರಿಗಣಿಸಿರುವ ಇಂಧನ ಸಚಿವ ಕೆ.ಜೆ.ಜಾರ್ಜ್‌ ಕರ್ತವ್ಯಲೋಪಕ್ಕೆ ಕಾರಣರಾದ ಅಧಿಕಾರಿಗಳನ್ನು ಅಮಾನತುಗೊಳಿಸಲು ಇಂಧನ ಇಲಾಖೆಗೆ ನಿರ್ದೇಶಿಸಿದ್ದರು.

ಇದನ್ನೂ ಓದಿ: ಎಣ್ಣೆ ಪಾರ್ಟಿ ಮಾಡಿದ್ದ ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು: ಬೆಳಗಾವಿ ಎಸ್ಪಿ ಆದೇಶ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.