ಹುಬ್ಬಳ್ಳಿ: ಇತ್ತೀಚೆಗೆ ಸಿಡಿಲು ಬಡಿದು ಮೃತರಾದ ಮಹಿಳೆಯ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರದ ಚೆಕ್ ನೀಡಲಾಗಿದೆ.
ಕುಂದಗೋಳ ತಾಲೂಕಿನ ನೆಲಗುಡ್ಡ ಗ್ರಾಮದಲ್ಲಿ ಜುಲೈ 7 ರಂದು ಜಮೀನಿನಲ್ಲಿ ಕೆಲಸ ನಿರ್ವಹಿಸುವ ಸಂದರ್ಭದಲ್ಲಿ ಸಿಡಿಲು ಬಡಿದು ಮಹಿಳೆ ಸೋಮವ್ವ ಸೋಮಪ್ಪ ಗಿಡ ಬಸಪ್ಪನವರ ಮೃತಪಟ್ಟಿದ್ದರು. ಅವರ ಕುಟುಂಬದವರಿಗೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಪರಿಹಾರದ ಚೆಕ್ ಅನ್ನು ಸರ್ಕ್ಯೂಟ್ ಹೌಸ್‌ನಲ್ಲಿ ವಿತರಿಸಿದರು.
ಮೃತರ ಮಗ ಮಂಜುನಾಥ ಸೋಮಪ್ಪ ಚೆಕ್ ಪಡೆದುಕೊಂಡರು. ಈ ಸಂದರ್ಭದಲ್ಲಿ ಶಾಸಕಿ ಕುಸುಮಾವತಿ ಶಿವಳ್ಳಿ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.