ಹುಬ್ಬಳ್ಳಿ: ಪೊಲೀಸ್ ಇಲಾಖೆಗೂ ಕೊರೊನಾ ವೈರಸ್ ಬಿಸಿ ತಟ್ಟಿರುವ ಆತಂಕಕಾರಿ ವಿಷಯ ಬೆಳಕಿಗೆ ಬಂದಿದೆ. ಕಮರಿಪೇಟೆ ಪೊಲೀಸ್ ಠಾಣೆಯ ಐದು ಜನ ಪೊಲೀಸರನ್ನು ಹೋಂ ಕ್ವಾರಂಟೈನ್‌ಗೆ ಕಳುಹಿಸಲಾಗಿದೆ. ಈ ಪೊಲೀಸರ ಕೈಗೆ ಆರೋಗ್ಯ ಇಲಾಖೆ ಸಿಬ್ಬಂದಿ ಸೀಲ್ ಹಾಕಿ ಹೋಂ ಕ್ವಾರಂಟೈನ್‌ನಲ್ಲಿ ಇಟ್ಟಿದ್ದಾರೆ.
ಮುಲ್ಲಾ ಓಣಿಯ ಸೋಂಕಿತನ ಜೊತೆ ಪ್ರಾಥಮಿಕ ಸಂಪರ್ಕದ ಪರಿಣಾಮ ಪೊಲೀಸ್ ಸಿಬ್ಬಂದಿಗೆ ಪ್ರತ್ಯೇಕ ವಾಸದಲ್ಲಿರುವಂತೆ ಸೂಚಿಸಲಾಗಿದೆ.