ಹುಬ್ಬಳ್ಳಿ : ಇಲ್ಲಿನ ಮಂಟೂರು ರಸ್ತೆಯ ಅರಳಿಕಟ್ಟಿ ಬಡಾವಣೆಯಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಮಹಿಳೆಯರನ್ನು ಶಹರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಅರಳಿಕಟ್ಟಿ ಕಾಲೋನಿಯ ಶಭಾನಾ ರೋಣ, ಶಹನಜಾ ರೋಣ, ರೇಷ್ಮಾ ಗದಗ, ಮೆಹಬೂಬಿ ಮಾಂಡಲಿ,ಸಬೀರಾ ಬೆಣ್ಣಿ ಬಂಧಿತರು. ನಿಷೇಧಾಜ್ಞೆ ಉಲ್ಲಂಘಿಸಿ ನಮಾಜ್ ಮಾಡುತ್ತಿದ್ದಾಗ ಹಾಗೂ ಪೊಲೀಸರ ಮೇಲೆ ಕಲ್ಲು ತೂರಿದ ಹಿನ್ನೆಲೆಯಲ್ಲಿ ಐವರನ್ನು ಬಂಧಿಸಲಾಗಿದೆ.
ನಿಷೇಧಾಜ್ಞೆ ಉಲ್ಲಂಘನೆ, ಕರ್ತವ್ಯಕ್ಕೆ ಅಡ್ಡಿ ಹಾಗೂ ಪೊಲೀಸರ ಮೇಲೆ ಕಲ್ಲು ತೂರಾಟದ ಪ್ರಕರಣದಡಿ ಕೇಸ್ ದಾಖಲಿಸಲಾಗಿದ್ದು ಘಟನೆಗೆ ಸಂಬಂಧಿಸಿದ ಇನ್ನಿಬ್ಬರು ಪ್ರಮುಖ ಆರೋಪಿಗಳು ಪರಾರಿಯಾಗಿದ್ದಾರೆ. ಉಳಿದ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.