ಧಾರವಾಡ: ನಗರದ ಪ್ರತಿಷ್ಠಿತ ಹೋಮಿಯೋಪತಿ ಮೆಡಿಕಲ್ ಕಾಲೇಜವೊಂದರಲ್ಲಿ ಫುಡ್ ಪಾಯ್ಸನ್(ಆಹಾರ ವಿಷಮಯ) ಆದ ಹಿನ್ನೆಲೆ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಭಾನುವಾರ ರಾತ್ರಿ ನಗರದ ಹೋಮಿಯೋಪತಿ ಕಾಲೇಜಿನಲ್ಲಿ ಕಾರ್ಯಕ್ರಮದ ಹಿನ್ನೆಲೆ ಕುಡಿಯುವ ನೀರಲ್ಲಿ ವಿಷಾಹಾರ ಸೇರಿರುವ ಶಂಕೆ ವ್ಯಕ್ತವಾಗುತ್ತಿದೆ. ವಿದ್ಯಾರ್ಥಿಗಳು ಅಸ್ವಸ್ಥಗೊಳ್ಳುತ್ತಿದ್ದಂತೆ ಅದೇ ಕಾಲೇಜಿನ ಆಸ್ಪತ್ರೆಯಲ್ಲಿ ವಿದ್ಯಾರ್ಥಿಗಳನ್ನು ದಾಖಲಿಸಲಾಗಿದೆ.
ನರ್ಸಿಂಗ್, ಮೆಡಿಕಲ್ ಕಾಲೇಜಿನ ಅರ್ಧಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ. ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಮಾಹಿತಿ ಹೊರ ಹೋಗದಂತೆ ವಿದ್ಯಾರ್ಥಿಗಳಿಗೆ ಬೆದರಿಕೆಯನ್ನು ಕೂಡಾ ಆಡಳಿತ ಮಂಡಳಿ ಹಾಕಿದೆ ಎಂಬ ಆರೋಪ ಕೇಳಿಬಂದಿದೆ. ವಿದ್ಯಾಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.