ಹುಬ್ಬಳ್ಳಿ: ಮಹಾಮಾರಿ ಕೊರೊನಾ ವಿರುದ್ಧ ಹೋರಾಡುತ್ತಿರುವ ಸುಮಾರು 50ಕ್ಕೂ ಅಧಿಕ ಪೌರಕಾರ್ಮಿಕರು ಮತ್ತು ಪೊಲೀಸ್ ಸಿಬ್ಬಂದಿಗೆ ಸ್ವಚ್ಛ ಸೇವಾ ಸಮಿತಿಯಿಂದ ಸನ್ಮಾನ ಮಾಡಲಾಯಿತು.
ಅಣ್ಣಿಗೇರಿ ಪಟ್ಟಣದ ಸ್ವಚ್ಛ ಸೇವಾ ಸಮಿತಿಯಿಂದ ಗೌರವ ಸಲ್ಲಿಸಲಾಗಿದ್ದು, ಹಗಲು ರಾತ್ರಿ ಎನ್ನದೇ ಕೊರೊನಾ ವಿರುದ್ಧ ಹೋರಾಡುತ್ತಿರುವ ಪೌರಕಾರ್ಮಿಕರಿಗೆ ಶಾಲು ಹೊದಿಸಿ, ಹೂ ಮಾಲೆ ಹಾಕಿ ಸನ್ಮಾನಿಸಲಾಯಿತು.
ನವಲಗುಂದ ಶಾಸಕ ಶಂಕರ್ ಪಾಟೀಲ್ ಮುನೇನಕೊಪ್ಪ ಸಹ ಕಾರ್ಯಕ್ರಮದಲ್ಲಿ ಭಾಗಿಯಾಗಿ ಪೊಲೀಸ್ ಇಲಾಖೆ ಸಿಬ್ಬಂದಿ ಮತ್ತು ಪೌರಕಾರ್ಮಿಕರಿಗೆ ಸನ್ಮಾನಿಸಿದರು. ಎಲ್ಲರೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಗೌರವ ಸಲ್ಲಿಸಿದ್ದು ವಿಶೇಷವಾಗಿತ್ತು.