ETV Bharat / state

ಜಾತಿ ಸಮೀಕ್ಷೆ ಬಗ್ಗೆ ರಾಜ್ಯ ಸರ್ಕಾರಕ್ಕೆ ಸ್ಪಷ್ಟತೆಯೇ ಇಲ್ಲ, ಸರ್ಕಾರ ತನ್ನ ಸ್ಪಷ್ಟ ನಿಲುವು ಬಹಿರಂಗಪಡಿಸಲಿ: ಮಾಜಿ ಸಿಎಂ ಬೊಮ್ಮಾಯಿ ಸವಾಲು - Israel Palestine War

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಯ ತಮ್ಮ ನಿವಾಸದಲ್ಲಿ ಜಾತಿ ಸಮೀಕ್ಷೆ ಬಗ್ಗೆ ಮಾತನಾಡಿದ್ದಾರೆ.

ಮಾಜಿ ಸಿಎಂ ಬೊಮ್ಮಾಯಿ
ಮಾಜಿ ಸಿಎಂ ಬೊಮ್ಮಾಯಿ
author img

By ETV Bharat Karnataka Team

Published : Oct 10, 2023, 12:16 PM IST

Updated : Oct 10, 2023, 12:42 PM IST

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಹಿಂದಿನ ಕಾಂಗ್ರೆಸ್​​ ಸರ್ಕಾರ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾಡಬಹುದಿತ್ತು. ಚುನಾವಣೆ ಬಂತು ಅಂತ ಆ ಸಮಯದಲ್ಲಿ ಮಾಡಲಿಲ್ಲ. ಈಗ ಈ ಬಗ್ಗೆ ಮಾತನಾಡುತ್ತಾರೆ, ಅದು ಜಾತಿಗಣತಿ ಹೌದೋ ಅಲ್ಲೋ ಅನ್ನೋದರ ಬಗ್ಗೆ ಸರ್ಕಾರಕ್ಕೆ ಸ್ಪಷ್ಟತೆ ಇಲ್ಲ. ಈ ಬಗ್ಗೆ ಸ್ಪಷ್ಟತೆಯನ್ನು ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒತ್ತಾಯಿಸಿದ್ದಾರೆ.

ನಗರದಲ್ಲಿಂದು ತಮ್ಮ ನಿವಾಸದ ಬಳಿ ಮಾತನಾಡಿದ ಅವರು, 160 ಕೋಟಿ ಖರ್ಚು ಮಾಡಿ ಜಾತಿ ಸಮೀಕ್ಷೆ ಮಾಡಿದ್ದು, ಅದು ಯಾವ ಜಾತಿ ಸಮೀಕ್ಷೆ ಅನ್ನೋ ಸ್ಪಷ್ಟತೆ ಇಲ್ಲ. ಅದರ ಬಗ್ಗೆ ಸ್ಪಷ್ಟತೆಯನ್ನು ಸರ್ಕಾರ ಮೊದಲು ಕೊಡಲಿ. ವರದಿ ಆಧಾರದ ಮೇಲೆ ಸಾಧಕ ಬಾಧಕಗಳ ಕುರಿತು ಚರ್ಚಿಸೋಣ ಅಂತ ಕಾಂಗ್ರೆಸ್​​ ನಾಯಕರು ಹೇಳಿದ್ದಾರೆ. ಈ ಸಮೀಕ್ಷೆಯ ಫಲಶ್ರುತಿ ಸಮಾಜದ ಮೇಲೆ ಯಾವ ಪರಿಣಾಮ ಬೀರುತ್ತೆ, ಅದರ ಫಲಿತಾಂಶ ಏನಾಗುತ್ತೆ. ಕೆಲವರ್ಗದಲ್ಲಿ ಅಸಮಾಧಾನ ಉಂಟಾಗುತ್ತದೆ ಎಂಬ ಬಗ್ಗೆ ಮೊದಲು ಚರ್ಚೆಯಾಗಲಿ ಎಂದರು.

ಇಸ್ರೇಲ್ ಪ್ಯಾಲೆಸ್ಟೈನ್​ ಯುದ್ಧ ಹಿನ್ನೆಲೆ ಕಾಂಗ್ರೆಸ್ ಪ್ಯಾಲೆಸ್ಟೈನ್​ ಬೆಂಬಲ ವಿಚಾರವಾಗಿ ಮಾತನಾಡಿದ ಅವರು, ಇದೊಂದು ಅಂತಾರಾಷ್ಟ್ರೀಯ ವಿಚಾರ. ಇಸ್ರೇಲ್ ಹಾಗೂ ಪ್ಯಾಲೆಸ್ಟೈನ್​ ನಡುವೆ ಬಹಳ ವರ್ಷದ ಸಂಘರ್ಷ ಇದೆ. ಪ್ಯಾಲೆಸ್ಟೈನ್​ ಹಮಾಸ್​ ಉಗ್ರವಾದಿ ಸಂಘಟನೆ, ಅವರು ಪ್ಯಾಲೆಸ್ಟೈನ್ ನಾಗರಿಕರಲ್ಲ. ಅದನ್ನು ಕಾಂಗ್ರೆಸ್ ಮರೆಮಾಚಲು ಪ್ರಯತ್ನಿಸುತ್ತಿದೆ. ಪ್ಯಾಲೆಸ್ಟೈನ್​ನಲ್ಲಿರುವಂತಹ ಭಯೋತ್ಪಾದಕರಿಗೆ ಕಾಂಗ್ರೆಸ್ ಬೆಂಬಲ ನೀಡ್ತಾ ಇದೆ ಎಂದು ಅವರು ಹೇಳಿದರು.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಎಲ್ಲಾ ಭಯೋತ್ಪಾದಕರು ಒಂದೇ. ಅಮಾಯಕರು, ಹೆಣ್ಣುಮಕ್ಕಳು, ಮಕ್ಕಳ ಮೇಲೆ ಬಾಂಬ್ ದಾಳಿ ಮಾಡಲಾಗುತ್ತಿದೆ. ಇದನ್ನು ಯಾವುದೇ ಸಮಾಜ ಹಾಗೂ ಸಮುದಾಯ ಒಪ್ಪಲು ಸಾಧ್ಯವಿಲ್ಲ. ಕಾಂಗ್ರೆಸ್ ಮತ್ತೆ ತುಷ್ಟಿಕರಣದ ರಾಜಕಾರಣಕ್ಕೆ ಇಳಿತಾ ಇದೆ, ಇದು ದೊಡ್ಡ ದುರಂತ ಎಂದು ಬೇಸರ ವ್ಯಕ್ತಪಡಿಸಿದರು.

ನರಗುಂದ ಸೇರಿದಂತೆ ಕೆಲ ಕ್ಷೇತ್ರಗಳ ಹಿಂದಿನ ಕಾಮಗಾರಿಗಳಿಗೆ ಸಿಎಂ ಶಿಫಾರಸು ವಿಚಾರವಾಗಿ ಮಾತನಾಡಿದ ಅವರು, ನರಗುಂದ ಸೇರಿದಂತೆ ಯಾವುದೇ ಕ್ಷೇತ್ರವಾಗಲಿ, ಕಾಮಗಾರಿಗಳ ತನಿಖೆ ಮಾಡಲಿ. ಲೋಕೋಪಯೋಗಿ ಇಲಾಖೆ, ನೀರಾವರಿ ಇಲಾಖೆ ಎಲ್ಲ ಇಲಾಖೆ ತನಿಖೆಯಾಗಲಿ, ಬೇಡ ಅಂದವರು ಯಾರು. ಕಾಮಗಾರಿ ಎಲ್ಲವೂ ಮುಗಿದಿದೆ, ಬಿಲ್​ಗಳನ್ನು ಸಹ ಕೊಡಲಾಗಿದೆ. ಆದರೆ, ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಕಡೆಗಳಲ್ಲಿನ ಕಾಮಗಾರಿಗಳ ಬಿಲ್ಲನ್ನು ಸರ್ಕಾರ ಇನ್ನೂ ಕೊಟ್ಟಿಲ್ಲ.‌ ಮೊದಲು ಬಿಲ್ಲುಗಳನ್ನು ಕೊಡಲಿ, ನಂತರ ಎಲ್ಲೆಲ್ಲಿ ತಪ್ಪುಗಳು ನಡೆದಿದೆ ಇದರ ಬಗ್ಗೆ ತನಿಖೆಯಾಗಲಿ ಎಂದು ಅವರು ಆಗ್ರಹಿಸಿದರು.

ರಾಜ್ಯಕ್ಕೆ ಕೇಂದ್ರ ಸರ್ಕಾರದ ಸ್ಟ್ರೋಕ್ ಆಗಿದೆ. ಬರ ಆದರೂ ಕಾವೇರಿ ಆದರೂ ಎಲ್ಲದಕ್ಕೂ ಕೇಂದ್ರಕ್ಕೆ ತೋರಿಸುತ್ತಾರೆ. ಈಗ ವಿದ್ಯುತ್ ಅಭಾವದ ಹಿನ್ನೆಲೆ ಕೇಂದ್ರಕ್ಕೆ ಬೊಟ್ಟು ಮಾಡುತ್ತಿದ್ದಾರೆ. ರಾಜ್ಯದ ವಿದ್ಯುತ್ ಉತ್ಪಾದನಾ ಘಟಕಗಳಿಗೆ ಸರಿಯಾದ ಕಲ್ಲಿದ್ದಲು ಒದಗಿಸಿ. ವಿದ್ಯುತ್ ಉತ್ಪಾದನೆ ಮಾಡಿದ್ದರೆ ಈ ಸಮಸ್ಯೆ ಬರ್ತಿರ್ಲಿಲ್ಲ. ತಮ್ಮ ಹಣಕಾಸಿನ ದುಃಸ್ಥಿತಿಗೆ ಅಸಮರ್ಪಕ ಕೆಲಸದಿಂದ ವಿದ್ಯುತ್ ಅಭಾವ ಬಿಗಡಾಯಿಸಿದೆ. ಸರಿಯಾದ ವಿದ್ಯುತ್ ಪೂರೈಸುವುದು ರಾಜ್ಯ ಸರ್ಕಾರದ ಕರ್ತವ್ಯ. ಈ ಎಲ್ಲ ಉತ್ಪಾದನೆಗೆ ಕೇಂದ್ರ ಏನು ಸಹಾಯ ಮಾಡಬೇಕು, ಮಾಡುತ್ತದೆ ಎಂದ ಅವರು, ಮಾಜಿ ಸಚಿವ ವಿ ಸೋಮಣ್ಣ ಹೆಸರು ಪ್ರಸ್ತಾಪಿಸುತ್ತಲೇ ಧನ್ಯವಾದಗಳು ಎಂದರು.

ಇದನ್ನೂ ಓದಿ: ಗ್ಯಾರಂಟಿ ನಂಬರ್ ಆರು.. ಕತ್ತಲೆಭಾಗ್ಯ : ನಮ್ಮ ರೈತರಿಗೆ ಲೋಡ್ ಶೆಡ್ಡಿಂಗ್, ತಮಿಳುನಾಡಿಗೆ ಸಮೃದ್ಧ ನೀರು... ಹೆಚ್​ಡಿಕೆ ಕಿಡಿ

Last Updated : Oct 10, 2023, 12:42 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.