ಹುಬ್ಬಳ್ಳಿ: ರಾಜ್ಯದಲ್ಲಿ ಈ ಬಾರಿ ಗಣೇಶೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ಕೋವಿಡ್ನಿಂದಾಗಿ ಈವರೆಗೆ ಸೂಕ್ತ ರೀತಿಯಲ್ಲಿ ಆಚರಣೆ ನಡೆದಿರಲಿಲ್ಲ. ಇಲ್ಲಿಯ ರಾಣಿ ಚೆನ್ನಮ್ಮ ಮೈದಾನದಲ್ಲಿ ನಡೆಯುತ್ತಿರುವ ಉತ್ಸವಕ್ಕೆ ಎಲ್ಲರೂ ಕೈ ಜೋಡಿಸಬೇಕು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮನವಿ ಮಾಡಿದರು.
ನಗರದಲ್ಲಿ ಮಾತನಾಡಿದ ಅವರು, ಈದ್ಗಾದಲ್ಲಿ ಗಣೇಶೋತ್ಸವ ಮಾಡದಂತೆ ಅಂಜುಮನ್ ಸಂಸ್ಥೆ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. ಆದ್ರೆ ಈಗಾಗಲೇ ಹೈಕೋರ್ಟ್ ತೀರ್ಪು ಕೊಟ್ಟಿದೆ. ಕಾನೂನು ವ್ಯಾಪ್ತಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಲಾಗಿದೆ ಎಂದರು.
ಇದನ್ನೂ ಓದಿ: ಪಿಒಪಿ ಗಣಪತಿ ನಿರಾಕರಿಸಿ, ಜೇಡಿಮಣ್ಣಿನ ಮೂರ್ತಿ ಮನೆಗೆ ತನ್ನಿ: ಸಿಎಂ