ETV Bharat / state

ನನ್ನ ದೆಹಲಿ ಪ್ರವಾಸಕ್ಕೆ ಯಾವುದೇ ರಾಜಕೀಯ ಬಣ್ಣ ಬೇಡ : ಮಾಜಿ ಸಿಎಂ ಜಗದೀಶ್ ಶೆಟ್ಟರ್

ಸಿಎಂ ಬೊಮ್ಮಾಯಿ ದೆಹಲಿಗೆ ಭೇಟಿ ನೀಡಿದ ಬೆನ್ನಲ್ಲೇ ರಾತ್ರೋರಾತ್ರಿ ಮಾಜಿ ಮುಖ್ಯಮಂತ್ರಿ ಜಗದೀಶ್​​​ ಶೆಟ್ಟರ್ ದೆಹಲಿಗೆ ಪ್ರಯಾಣಿಸಿರುವುದು ಕುತೂಹಲಕ್ಕೆ ಕಾರಣವಾಗಿತ್ತು. ಈ ಕುರಿತಂತೆ ಶೆಟ್ಟರ್ ಸ್ಪಷ್ಟನೆ ನೀಡಿದ್ದಾರೆ..

Former CM Jagadish Shettar reacts on his delhi tour
ದೆಹಲಿ ಪ್ರವಾಸದ ಬಗ್ಗೆ ಜಗದೀಶ್ ಶೆಟ್ಟರ್ ಸ್ಪಷ್ಟನೆ
author img

By

Published : Feb 11, 2022, 6:57 PM IST

Updated : Feb 11, 2022, 9:43 PM IST

ಹುಬ್ಬಳ್ಳಿ : ದೆಹಲಿ ಪ್ರವಾಸಕ್ಕೆ ಯಾವುದೇ ರಾಜಕೀಯ ಬಣ್ಣ ಬೇಡ. ನಾನು ಈ ಹಿಂದೆ ತಿಳಿಸಿದಂತೆ ಸಂಪುಟಕ್ಕೆ ಸೇರುವ ಪ್ರಶ್ನೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು.

ದೆಹಲಿ ಭೇಟಿ ಬಗ್ಗೆ ಜಗದೀಶ್​ ಶೆಟ್ಟರ್​ ಸ್ಪಷ್ಟನೆ

ಜಿಲ್ಲೆಯಲ್ಲಿ ನಡೆಯುತ್ತಿರುವ ಕೈಗಾರಿಕೆಗಳಿಗೆ ಕೇಂದ್ರ ಸರ್ಕಾರದಿಂದ ನೆರವು, ಸಬ್ಸಿಡಿ ನೀಡುವ ಕುರಿತು ಮತ್ತು ನಗರದ ಅಭಿವೃದ್ಧಿ ಕಾಮಗಾರಿಗಳ ಕುರಿತು ಚರ್ಚಿಸಲು ನಾನು ದೆಹಲಿ ಪ್ರವಾಸ ಕೈಗೊಂಡಿದ್ದೆ. ಅಲ್ಲಿ ಸಚಿವ ಪಿಯುಷ್ ಗೋಯಲ್, ಪ್ರಲ್ಹಾದ್ ಜೋಶಿ ಅವರೊಂದಿಗೆ ಮಾತನಾಡಿದ್ದೇನೆ. ಹಾಗಾಗಿ, ದೆಹಲಿ ಪ್ರವಾಸಕ್ಕೆ ರಾಜಕೀಯ ಬಣ್ಣ ಬೇಡ ಎಂದು ತಿಳಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಗೆ ಭೇಟಿ ನೀಡಿದ ಬೆನ್ನಲ್ಲೇ ಶೆಟ್ಟರ್ ಅವರು ದೆಹಲಿಗೆ ತೆರಳಿದ್ದರು. ಇದು ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ : ರಾತ್ರೋರಾತ್ರಿ ದೆಹಲಿಗೆ ತೆರಳಿದ ಶೆಟ್ಟರ್: ಕುತೂಹಲ ಕೆರಳಿಸಿದ ಮಾಜಿ ಸಿಎಂ ಪ್ರಯಾಣ

Last Updated : Feb 11, 2022, 9:43 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.