ETV Bharat / state

ಸಿದ್ದರಾಮಯ್ಯ ಹಾಗೂ ಡಿಕೆಶಿ ಸಿಎಂ ಆಗೋ ಭ್ರಮೆಯಲ್ಲಿದ್ದಾರೆ : ಜಗದೀಶ್ ಶೆಟ್ಟರ್ - ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ನಾಯಕರ ವಿರುದ್ಧ ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಾಗ್ದಾಳಿ

ಬಿಜೆಪಿ ಬಿಟ್ಟು ಕಾಂಗ್ರೆಸ್​ಗೆ ಹೋಗೋದಕ್ಕೆ ಸದ್ಯ ಯಾರೂ ತಯಾರಿಲ್ಲ. ಸಿಎಂ ಆಗಬೇಕು ಅಂತಾ ಸಿದ್ದರಾಮಯ್ಯ ಹಾಗೂ ಡಿಕೆಶಿ ಪ್ರತಿದಿನ ಹೊಡೆದಾಡುತ್ತಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್​ ಸಿಎಂ ಆಗೋ ಭ್ರಮೆಯಲ್ಲಿದ್ದಾರೆ ಎಂದು ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದರು.

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿಕೆ
ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿಕೆ
author img

By

Published : Jan 27, 2022, 4:30 PM IST

Updated : Jan 27, 2022, 5:21 PM IST

ಹುಬ್ಬಳ್ಳಿ : ನಾವೇನು ದೊಡ್ಡ ಸಮಾವೇಶ ಮಾಡಿ ವಿದ್ಯಾರ್ಥಿಗಳನ್ನು ದುರ್ಬಳಕೆ ಮಾಡಿಕೊಂಡಿಲ್ಲ. ಈ ಭಾಗದಲ್ಲಿ ಅಭಿವೃದ್ಧಿ ಕೆಲಸಗಳಾಗಿವೆ. ಹೀಗಾಗಿ ಅಭಿನಂದನೆ ಸಲ್ಲಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು.

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿಕೆ

ನಗರದ ಕೇಶ್ವಾಪುರಲ್ಲಿರುವ ರಸ್ತೆ ಉದ್ಘಾಟನೆಗೆ ಶಾಲಾ-ಕಾಲೇಜು ವಿದ್ಯಾರ್ಥಿಗಳ ಬಳಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ವಿದ್ಯಾರ್ಥಿಗಳನ್ನ ಬಳಕೆ ಮಾಡಿಕೊಂಡಿರೋದನ್ನ ಅನ್ಯತಾ ಭಾವಿಸೋದು ಬೇಡ ಎಂದರು. ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ನಮ್ಮ ಸಂಪರ್ಕದಲ್ಲಿದಾರೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್​​ ಕೇವಲ ಹುಳ ಬಿಡುವ ಕೆಲಸ ಮಾಡುತ್ತಿದ್ದಾರೆ ಎಂದರು.

ಬಿಜೆಪಿ ಬಿಟ್ಟು ಕಾಂಗ್ರೆಸ್​ಗೆ ಹೋಗೋದಕ್ಕೆ ಸದ್ಯ ಯಾರೂ ತಯಾರಿಲ್ಲ. ಸಿಎಂ ಆಗಬೇಕು ಅಂತಾ ಸಿದ್ದರಾಮಯ್ಯ ಹಾಗೂ ಡಿಕೆಶಿ ಪ್ರತಿದಿನ ಹೊಡೆದಾಡುತ್ತಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್​ ಸಿಎಂ ಆಗೋ ಭ್ರಮೆಯಲ್ಲಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಅವರಲ್ಲಿಯೇ ಕಿತ್ತಾಟ ಶುರವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್​​ಗೆ ಯಾರೂ ಹೋಗಲ್ಲ. ಚುನಾವಣೆ ಬಂದಾಗ ಮಾತ್ರ ಕಾಂಗ್ರೆಸ್ ನವರು ಇಂತಹ ಗಿಮಿಕ್ ಶುರು ಮಾಡುತ್ತಾರೆ. ಆ ತರ ಯಾರಾದರೂ ಸಂಪರ್ಕದಲ್ಲಿದ್ದರೆ ಅವರ ಹೆಸರುಗಳನ್ನ ಬಹಿರಂಗಪಡಿಸಲಿ. ಈ ಚುನಾವಣೆಯಾದ ನಂತರ ಕಾಂಗ್ರೆಸ್ ಸಂಪೂರ್ಣ ತನ್ನ ಅಸ್ತಿತ್ವ ಕಳೆದುಕೊಳ್ಳಲಿದೆ ಎಂದು ಶೆಟ್ಟರ್ ಭವಿಷ್ಯ ನುಡಿದರು​.

ಡಿಕೆಶಿ ಪ್ಲಾನ್​​​ಗೆ ರಮೇಶ ಜಾರಕಿಹೊಳಿಯಿಂದ ರೀವರ್ಸ್ ಆಪರೇಶನ್ ವಿಚಾರಕ್ಕೆ ಪ್ರತಿಕ್ರಿಯಿಸಿ, ಆ ರೀತಿಯ ಯಾವುದೇ ಬೆಳವಣಿಗೆ ನಮ್ಮಲ್ಲಿ ನಡೆದಿಲ್ಲ. ರಾಜ್ಯಾಧ್ಯಕ್ಷರಾಗಲಿ, ಸಿಎಂ ಆಗಲಿ ಈ ಬಗ್ಗೆ ಏನೂ ಹೇಳಿಲ್ಲ ಎಂದರು.

ಜಾಹೀರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

Last Updated : Jan 27, 2022, 5:21 PM IST

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.