ಧಾರವಾಡ: ಜಿ.ಪಂ. ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಭೇಟಿ ನೀಡಿದರು.
ಧಾರವಾಡದ ಶಿವಗಿರಿಯಲ್ಲಿರುವ ವಿನಯ್ ಕುಲಕರ್ಣಿ ನಿವಾಸಕ್ಕೆ ಭೇಟಿ ನೀಡಿದ ಅವರು, ವಿನಯ್ ಕುಟುಂಬಸ್ಥರಿಗೆ ಧೈರ್ಯ ತುಂಬಿದರು.
ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಲು ನಿರಾಕರಿಸಿದ ಸಿದ್ದರಾಮಯ್ಯ, ಏನೂ ಮಾತನಾಡೊಲ್ಲರೀ...ನೋ ರಿಯಾಕ್ಷನ್... ಎಂದರು.
ಇದನ್ನು ಓದಿ:ರಾಜ್ಯಕ್ಕೆ ಕೇಂದ್ರ ಅಧ್ಯಯನ ತಂಡ ಆಗಮನ: ನಾಳೆ ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ
ಚಂದ್ರಶೇಖರ ಇಂಡಿಗೆ ಕೋವಿಡ್ ಟೆಸ್ಟ್ ಮಾಡಿಸಿದ ಸಿಬಿಐ:
ಜಿ.ಪಂ. ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದ ಆರೋಪಿ, ವಿನಯ್ ಕುಲಕರ್ಣಿ ಅವರ ಸೋದರಮಾವ ಆಗಿರುವ ಚಂದ್ರಶೇಖರ್ ಇಂಡಿಗೆ ಸಿಬಿಐ ವಶಕ್ಕೆ ಪಡೆದುಕೊಂಡಿದ್ದು, ಇಂದು ಕೋವಿಡ್ ಟೆಸ್ಟ್ ಮಾಡಿಸಲಾಗಿದೆ. ಕೋವಿಡ್ ವರದಿ ಬಳಿಕ ನ್ಯಾಯಾಧೀಶರ ಎದುರು ಹಾಜರುಪಡಿಸುವ ಸಾಧ್ಯತೆಯಿದೆ.