ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ಮಾಜಿ ಮೇಯರ್ ಒಬ್ಬರು 75ನೇ ವಯಸ್ಸಿನಲ್ಲಿ ಎರಡನೇ ವಿವಾಹ ಮಾಡಿಕೊಂಡು ಸುದ್ದಿಯಾಗಿದ್ದಾರೆ.
ಮಾಜಿ ಮೇಯರ್ ಡಿ.ಕೆ.ಚವ್ಹಾಣ್ ಅವರು 75ನೇ ವಯಸ್ಸಿನಲ್ಲಿ ಎರಡನೇ ವಿವಾಹವಾಗಿದ್ದಾರೆ. ಮೊದಲ ಪತ್ನಿ ಶಾರದಾ ಕಳೆದ ಮೂರು ತಿಂಗಳ ಹಿಂದೆ ಮರಣ ಹೊಂದಿದ್ದರು. ಪತ್ನಿ ತೀರಿಕೊಂಡು ಮೂರು ತಿಂಗಳ ನಂತರ ಪತ್ನಿಯ ಸಹೋದರಿ ಅನಸೂಯಾರನ್ನೇ ಡಿ.ಕೆ.ಚವ್ಹಾಣ್ ಕೈ ಹಿಡಿಯುವ ಮೂಲಕ ಅವರಿಗೆ ಬಾಳು ನೀಡಿದ್ದಾರೆ.
ಮಾಜಿ ಮೇಯರ್ ಮದುವೆ ಸಂಭ್ರಮದಲ್ಲಿ ಮೂವರು ಮಕ್ಕಳು, ಸೊಸೆಯಂದಿರು ಹಾಗೂ ಮೊಮ್ಮಕ್ಕಳು ಭಾಗಿಯಾಗಿದ್ದು, ಡಿ.ಕೆ ಚವ್ಹಾಣ್ ಮದುವೆ ವಿಡಿಯೋ ವೈರಲ್ ಆಗಿದೆ.
ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಜಾಗೃತಿ ಮೂಡಿಸಲು ಪೊಲೀಸರ ಬೈಕ್ ರ್ಯಾಲಿ