ETV Bharat / state

ಕುಲಕರ್ಣಿ ನ್ಯಾಯಾಂಗ ಬಂಧನ ಅವಧಿ ಅಂತ್ಯ : ಇಂದು ವಿಡಿಯೋ ಕಾನ್ಫರೆನ್ಸ್​ ಮೂಲಕ ವಿಚಾರಣೆಗೆ​ ಹಾಜರು

ಧಾರವಾಡ ಜಿಲ್ಲಾ ಪಂಚಾಯಿತಿ​ ಸದಸ್ಯ ಯೋಗೀಶ್​ ಗೌಡ ಹತ್ಯೆ ಆರೋಪ ಪ್ರಕರಣದಲ್ಲಿ ‌ಬಂಧನಕ್ಕೊಳಗಾಗಿರುವ ಮಾಜಿ ಸಚಿವ ವಿನಯ್​ ಕುಲಕರ್ಣಿ ನ್ಯಾಯಾಂಗ ಬಂಧನ ಅವಧಿ ಪೂರ್ಣಗೊಂಡಿದೆ. ಇಂದು ಹಿಂಡಲಗಾ ಕೇಂದ್ರ ಕಾರಾಗೃಹದಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ವಿನಯ್​ ಅವರ ವಿಚಾರಣೆ ನಡೆಯಲಿದೆ.

ವಿನಯ್​ ಕುಲಕರ್ಣಿ
Vinay Kulkarni
author img

By

Published : Dec 21, 2020, 9:46 AM IST

ಧಾರವಾಡ: ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್​ ಗೌಡ ಕೊಲೆ ಆರೋಪ ಪ್ರಕರಣದಲ್ಲಿ ‌ಬಂಧನಕ್ಕೊಳಗಾಗಿರುವ ಮಾಜಿ ಸಚಿವ ವಿನಯ್​ ಕುಲಕರ್ಣಿ ನ್ಯಾಯಾಂಗ ಬಂಧನ ಅವಧಿ ಪೂರ್ಣಗೊಂಡಿದೆ.

ಇಂದು ವಿನಯ್​ ಕುಲಕರ್ಣಿ ನ್ಯಾಯಾಂಗ ಬಂಧನದ ಅವಧಿ ಪೂರ್ಣಗೊಳ್ಳಲಿದ್ದು, ಹಿಂಡಲಗಾ ಕೇಂದ್ರ ಕಾರಾಗೃಹದಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಅವರನ್ನು ವಿಚಾರಣೆಗೆ ​ಹಾಜರುಪಡಿಸಿ ಧಾರವಾಡದ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ.

ಈಗಾಗಲೇ ಹೈ ಕೋರ್ಟ್​​ನಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ‌ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ವಿನಯ್​​ ಜಾಮೀನು ಅರ್ಜಿಗೆ ಸಿಬಿಐಗೆ ತಕರಾರು ಅರ್ಜಿ ಸಲ್ಲಿಸಲು ಹೈಕೋರ್ಟ್ ಸೂಚಿಸಿದೆ. ನಾಳೆ ವಿನಯ್ ಜಾಮೀನು ಅರ್ಜಿ ವಿಚಾರಣೆ ಧಾರವಾಡ ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ವಿಚಾರಣೆಗೆ ಬರಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.