ಧಾರವಾಡ: ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಸಿಬಿಐನಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ನಾಳೆ ನಡೆಯಲಿದೆ. ಈ ಹಿನ್ನೆಲೆ ಅವರು ಆರೋಪ ಮುಕ್ತರಾಗಿ ಬರುವಂತೆ ಧಾರವಾಡದ ಗಣೇಶನಗರ ಬಲಮುರಿ ಗಣೇಶ ದೇವಸ್ಥಾನದಲ್ಲಿ ಗಣಹೋಮ ನೆರವೇರಿಸಲಾಗಿದೆ.
ಕಾಂಗ್ರೆಸ್ ಮಹಿಳಾ ಘಟಕದ ಸದಸ್ಯೆಯರು ಬಲಮುರಿ ದೇವಸ್ಥಾನದಲ್ಲಿ ಗಣಹೋಮ ನೆರವೇರಿಸಿದ್ದಾರೆ. ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮುತ್ತೈದೆಯರಿಗೆ ಉಡಿ ತುಂಬಿದ್ದಾರೆ. ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಜೈಲು ಸೇರಿ ಇಂದಿಗೆ ಎರಡು ತಿಂಗಳಾಗಿದೆ.
ಕಾಂಗ್ರೆಸ್ ಕಾರ್ಯಕರ್ತರು, ವಿನಯ್ ಅವರ ಅಭಿಮಾನಿಗಳು ನಿನ್ನೆಯಿಂದ ಅನೇಕ ಕಡೆಗಳಲ್ಲಿ ಪೂಜೆ, ಪುನಸ್ಕಾರಗಳನ್ನು ಮಾಡಿ ವಿನಯ್ ಕುಲಕರ್ಣಿ ಆರೋಪ ಮುಕ್ತರಾಗಿ ಜೈಲಿನಿಂದ ಹೊರಬರಲಿ ಬರಲಿ ಎಂದು ಪ್ರಾರ್ಥಿಸುತ್ತಿದ್ದಾರೆ. ನಾಳೆ ಧಾರವಾಡ ಹೈಕೋರ್ಟ್ ಪೀಠದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.
ಇದನ್ನೂ ಓದಿ: ವಿನಯ್ ಕುಲಕರ್ಣಿ ಜೈಲಿನಿಂದ ಬಿಡುಗಡೆಯಾಗಲೆಂದು ಅಭಿಮಾನಿಗಳಿಂದ ವಿಶೇಷ ಪೂಜೆ