ಹುಬ್ಬಳ್ಳಿಯಲ್ಲಿ ಚಾಕುವಿನಿಂದ ಇರಿದು ಮಾಜಿ ರೌಡಿಶೀಟರ್ ಹತ್ಯೆ - Former Rowdisheater Murder in Hubli
ಹುಬ್ಬಳ್ಳಿಯಲ್ಲಿ ಮಾಜಿ ರೌಡಿಶೀಟರ್ನನ್ನು ದುಷ್ಕರ್ಮಿಗಳು ಹಾಡುಹಗಲೇ ಚಾಕುವಿನಿಂದ ಇರಿದು ಕೊಲೆ ಮಾಡಿದ್ದು, ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಲಿದೆ.
ಹುಬ್ಬಳ್ಳಿಯಲ್ಲಿ ಚಾಕುವಿನಿಂದ ಇರಿದು ಮಾಜಿ ರೌಡಿಶೀಟರ್ ಹತ್ಯೆ
ಹುಬ್ಬಳ್ಳಿ: ಮಾಜಿ ರೌಡಿಶೀಟರ್ನನ್ನು ದುಷ್ಕರ್ಮಿಗಳು ಹಾಡುಹಗಲೇ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕಮರಿಪೇಟೆ ನಿವಾಸಿಯಾಗಿರುವ ರಮೇಶ ಭಾಂಡ ಕೊಲೆಯಾದ ಮಾಜಿ ರೌಡಿಶೀಟರ್. ತೀವ್ರವಾಗಿ ಗಾಯಗೊಂಡಿರುವ ರಮೇಶನನ್ನ ಚಿಕಿತ್ಸೆಗಾಗಿ ಕಿಮ್ಸ್ ಕರೆದುಕೊಂಡು ಹೋಗುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ.
ಯಾವ ಕಾರಣಕ್ಕೆ ಹಲ್ಲೆ ನಡೆದಿದೆ ಎಂದು ಗೊತ್ತಾಗಿಲ್ಲ. ಕೆಲಮೂಲಗಳ ಪ್ರಕಾರ ಆಸ್ತಿ ವಿವಾದಕ್ಕೆ ಕೊಲೆ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ. ಇದಲ್ಲದೆ ಮೃತ ಭಾಂಡಗೆ ಹಲವು ಅಕ್ರಮ ಚಟುವಟಿಕೆಯಲ್ಲಿ ಗುರುತಿಸಿಕೊಂಡಿದ್ದ. ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ.
ಈ ಕುರಿತು ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಲಿದ್ದು, ಪೊಲೀಸರು ಕೊಲೆ ಆರೋಪಿಗಳಿಗಾಗಿ ಬಲೆಬೀಸಿದ್ದಾರೆ.