ETV Bharat / state

ಧಾರವಾಡದಲ್ಲಿ ಮತ್ತೆ 4 ಕೊರೊನಾ ಕೇಸ್​ ಪತ್ತೆ: ಸೋಂಕಿತರ ಸಂಖ್ಯೆ 70ಕ್ಕೆ ಏರಿಕೆ - corona news

ಧಾರವಾಡದಲ್ಲಿ ಇಂದು ನಾಲ್ಕು ಕೊರೊನಾ ಪಾಸಿಟಿವ್​ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 70ಕ್ಕೆ ಏರಿಕೆಯಾಗಿದೆ.

ಜಿಲ್ಲಾಧಿಕಾರಿ ದೀಪಾ ಚೋಳನ್
ಜಿಲ್ಲಾಧಿಕಾರಿ ದೀಪಾ ಚೋಳನ್
author img

By

Published : Jun 10, 2020, 8:07 PM IST

ಧಾರವಾಡ: ಜಿಲ್ಲೆಯಲ್ಲಿ ಇಂದು ನಾಲ್ಕು ಕೋವಿಡ್-19 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.

DWD-67 ರೋಗಿ- 5969 (29 ವರ್ಷ, ಮಹಿಳೆ) ಇವರು ಹುಬ್ಬಳ್ಳಿ ಭೈರಿದೇವರಕೊಪ್ಪ ಶಾಂತಿನಿಕೇತನ ಕಾಲೋನಿಯ ಸನಾ ಕಾಲೇಜು ಹಿಂಭಾಗದ ನಿವಾಸಿಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಯಾಣಿಸಿದ ಹಿನ್ನೆಲೆ ಹೊಂದಿದ್ದಾರೆ.

DWD - 68 ರೋಗಿ- 5970 (31 ವರ್ಷ, ಮಹಿಳೆ) ಇವರು ಧಾರವಾಡದ ಯಾಲಕ್ಕಿ ಶೆಟ್ಟರ ಕಾಲೋನಿ ನಿವಾಸಿಯಾಗಿದ್ದಾರೆ. ತೀವ್ರ ಜ್ವರ, ಕೆಮ್ಮು, ನೆಗಡಿಯಿಂದ ಬಳಲುತ್ತಿದ್ದರು. ತಪಾಸಣೆಗೆ ಒಳಪಡಿಸಿದಾಗ ಕೋವಿಡ್-19 ಸೋಂಕು ದೃಢಪಟ್ಟಿದೆ.

DWD- 69- ರೋಗಿ- 5971 ( 26 ವರ್ಷ, ಮಹಿಳೆ) ಹುಬ್ಬಳ್ಳಿ ನೇಕಾರ ನಗರ ನಿವಾಸಿಯಾಗಿದ್ದಾರೆ. ಸಂಪರ್ಕ ಪತ್ತೆ ಮಾಡಲಾಗುತ್ತಿದೆ.

DWD 70- ರೋಗಿ- 5972 ( 40 ವರ್ಷ, ಪುರುಷ) ಅಣ್ಣಿಗೇರಿಯ ನಿವಾಸಿ, ನವದೆಹಲಿಯಿಂದ ಹಿಂದಿರುಗಿದ ಹಿನ್ನೆಲೆ ಹೊಂದಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ 70ಕ್ಕೆ ಏರಿಕೆಯಾಗಿದೆ. ಈಗಾಗಲೇ 45 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದವರು ಹುಬ್ಬಳ್ಳಿಯ ಕಿಮ್ಸ್​​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.