ETV Bharat / state

ಕುಂದಗೊಳ ಬಳಿ ಸರಣಿ ಅಪಘಾತ: ನಾಲ್ವರು ಸ್ಥಳದಲ್ಲೇ ಸಾವು, ಮೂವರಿಗೆ ಗಂಭೀರ ಗಾಯ - ಹುಬ್ಬಳ್ಳಿ ರಸ್ತೆ ಅಪಘಾತ

ಕುಂದಗೋಳ ಬಳಿ ಸರಣಿ ಅಪಘಾತ ಸಂಭವಿಸಿ, ನಾಲ್ವರು ಸಾವನ್ನಪ್ಪಿದ್ದಾರೆ.

ಕುಂದಗೊಳ ಬಳಿ ಸರಣಿ ಅಪಘಾತ
ಕುಂದಗೊಳ ಬಳಿ ಸರಣಿ ಅಪಘಾತ
author img

By ETV Bharat Karnataka Team

Published : Jan 6, 2024, 10:06 AM IST

Updated : Jan 6, 2024, 1:24 PM IST

ಹುಬ್ಬಳ್ಳಿ: ಎರಡು ಕಾರು ಮತ್ತು ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿ ನಾಲ್ವರು ಸ್ಥಳದಲ್ಲೇ ಮೃತಪಟ್ಟು, ಇತರ ಮೂವರು ಗಂಭೀರ ಗಾಯಗೊಂಡ ಘಟನೆ ಕುಂದಗೋಳ ತಾಲೂಕಿನ ಬೆಳ್ಳಿಗಟ್ಟಿ ಬಳಿ ಶನಿವಾರ ಬೆಳಗ್ಗೆ ಸಂಭವಿಸಿದೆ. ಮೃತರನ್ನು ಹಾಸನ‌ ಜಿಲ್ಲೆಯ ಅರಕಲಕೂಡಿನ ಮಣಿಕಂಠ (26), ಪವನ್ (23), ಚಂದನ್ (31) ಹಾಗೂ ಹರೀಶ್ (34) ಎಂದು ಗುರುತಿಸಲಾಗಿದೆ.

ಘಟನೆಯ ವಿವರ: ಮೊದಲು, ಬೆಂಗಳೂರಿನಿಂದ ಶಿರಡಿ ಹಾಗೂ ಗೋವಾಕ್ಕೆ ಹೊರಟಿದ್ದ ಕಾರುಗಳ ನಡುವೆ ಅಪಘಾತ ಸಂಭವಿಸಿದೆ. ಪರಿಣಾಮ ಎರಡೂ ಕಾರಿನಲ್ಲಿದ್ದವರಿಗೆ ಗಾಯಗಳಾಗಿದ್ದವು. ಆಗ ಮೂವರನ್ನು ಆಂಬ್ಯುಲೆನ್ಸ್ ಮೂಲಕ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನುಳಿದ ನಾಲ್ಕು ಜನರು ರಸ್ತೆ ಪಕ್ಕದಲ್ಲಿ ಮಾತನಾಡುತ್ತ ನಿಂತಿದ್ದರು. ಈ ವೇಳೆ ಹಾವೇರಿ ಕಡೆಯಿಂದ ಬಂದ ಲಾರಿಯು ಅಪಘಾತವಾಗಿ ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನ ಪಕ್ಕದಲ್ಲೇ ನಿಂತಿದ್ದ ನಾಲ್ವರೂ ತೀವ್ರ ಗಾಯಗೊಂಡು ಸ್ಥಳದಲ್ಲೇ ಅಸುನೀಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ್ ಹಾಗೂ ಕುಂದಗೋಳ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ. ಶವಗಳನ್ನು ಕಿಮ್ಸ್ ಆಸ್ಪತ್ರೆ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಕುಂದಗೋಳ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

'ಈ‌ ಬಗ್ಗೆ ಮೃತರ ಸಂಬಂಧಿಗಳಿಗೆ ಮಾಹಿತಿ ರವಾನಿಸಲಾಗಿದೆ. ಬೆಳಗ್ಗೆ ಮಂಜು ಆವರಿಸಿದ್ದ ಕಾರಣ ಅಪಘಾತ ಸಂಭವಿಸಿರಬಹುದು ಎಂಬ ಸಂಶಯವಿದೆ. ಲಾರಿ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ತನಿಖೆ ಮುಂದುವರೆದಿದೆ' ಎಂದು ಎಸ್​​ಪಿ ಗೋಪಾಲ್ ಬ್ಯಾಕೋಡ್ ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಘಟನೆಗಳು; ಬಸ್- ಜೀಪು ಮಧ್ಯೆ ಡಿಕ್ಕಿ : ಕೆಎಸ್​​ಆರ್​ಟಿಸಿ ಎಲೆಕ್ಟ್ರಿಕ್ ಬಸ್ ಹಾಗೂ ಜೀಪ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ, ಸ್ಥಳದಲ್ಲೇ ಮೂವರು ಅಸುನೀಗಿದ್ದ ಘಟನೆ ಮೈಸೂರು ಜಿಲ್ಲೆಯ ಹುಣಸೂರು ನಗರದ ಆರ್​ಟಿಒ ಕಚೇರಿಯ ಬಳಿ ಇತ್ತೀಚೆಗೆ ನಡೆದಿತ್ತು. ವಿರಾಜಪೇಟೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಹಾಗೂ ಹುಣಸೂರಿನಿಂದ ಪಿರಿಯಾಪಟ್ಟಣಕ್ಕೆ ಹೊರಟ ಜೀಪ್ ನಡುವೆ ಅಪಘಾತವಾಗಿತ್ತು. ಜೀಪ್​​ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಉಳಿದ ಮೂವರಿಗೆ ಗಂಭೀರ ಗಾಯಗಳಾಗಿದ್ದವು.

ಕಾರು- ಬಸ್​​ ಅಪಘಾತ : ಕಾರು ಮತ್ತು ಸರ್ಕಾರಿ ಬಸ್​ ನಡುವೆ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಎಲ್ಲ ಐವರು ಮೃತಪಟ್ಟ ಘಟನೆ ಕೆಲ ದಿನಗಳ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬಂಡಲದಲ್ಲಿ ಸಂಭವಿಸಿತ್ತು. ಅಪಘಾತದಲ್ಲಿ ಐವರು ಸ್ಥಳದಲ್ಲೇ ಅಸುನೀಗಿದ್ದರು. ಶಿರಸಿಯಿಂದ ಕುಮಟಾ ಕಡೆಗೆ ಹೋಗುತ್ತಿದ್ದ ಸರ್ಕಾರಿ ಬಸ್​​​​​ ಹಾಗೂ ಕುಮಟಾ ಕಡೆಯಿಂದ ಶಿರಸಿಗೆ ಬರುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ನಡುವೆ ಅಪಘಾತ ಆಗಿತ್ತು.

ಇದನ್ನೂ ಓದಿ: ಸಂತೆ ಮುಗಿಸಿ ಬಸ್​ಗಾಗಿ ಕಾಯುತ್ತಿದ್ದವರಿಗೆ ಐಷರ್ ಡಿಕ್ಕಿ ​: ಐವರು ಸಾವು

Last Updated : Jan 6, 2024, 1:24 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.