ಧಾರವಾಡ: ಟೆಂಪೋ- ಕಾರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಸ್ಥಳದಲ್ಲಿಯೇ ನಾಲ್ವರು ಮೃತಪಟ್ಟ ಘಟನೆ ತಾಲೂಕಿನ ಯರಿಕೊಪ್ಪ ಗ್ರಾಮದ ಬಳಿ ಸಂಭವಿಸಿದೆ.
ಕಾರನಲ್ಲಿದ್ದನ ನಾಲ್ವರು ದುರ್ಮರಣ ಹೊಂದಿದ್ದು, ಮಹಿಳೆ ಸೇರಿ ಮಗುವೊಂದಕ್ಕೆ ಗಾಯಗಳಾಗಿವೆ. ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಕೊಪ್ಪಳ ಜಿಲ್ಲೆಯ ಗಂಗಾವತಿ ಮೂಲದ ಕಾರು ಇದಾಗಿದ್ದು, ಮೃತರ ಮಾಹಿತಿ ತಿಳಿದು ಬಂದಿಲ್ಲ. ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಹೆಚ್ಚಿನ ಮಾಹಿತಿಯನ್ನ ನಿರೀಕ್ಷಿಸಲಾಗುತ್ತಿದೆ.