ಹುಬ್ಬಳ್ಳಿ(ಧಾರಾವಾಡ): ಇಸ್ಪೀಟ್ ಆಡಿದ್ದ ಪೊಲೀಸ್ ಇನ್‌ಸ್ಪೆಕ್ಟರ್ ಸೇರಿ ನಾಲ್ವರನ್ನು ಅಮಾನತು ಮಾಡಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಲಾಬೂರಾಮ್ ಆದೇಶ ಹೊರಡಿಸಿದ್ದಾರೆ. ಹುಬ್ಬಳ್ಳಿಯ ಅಕ್ಷಯ ಕಾಲೋನಿಯ ಮನೆಯೊಂದರಲ್ಲಿ ಶುಕ್ರವಾರ ರಾತ್ರಿ ಇಸ್ಪೀಟ್ ಆಡುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಗೋಕುಲ್ ರೋಡ್ ಠಾಣೆ ಪೊಲೀಸರು ರೆಡ್ ಹ್ಯಾಂಡಾಗಿ ಬಂಧಿಸಿದ್ದರು.
ಹುಬ್ಬಳ್ಳಿ-ಧಾರವಾಡ ಸಿಎಆರ್ ರಿಸರ್ವ್ ಪೊಲೀಸ್ ಇನ್‌ಸ್ಪೆಕ್ಟರ್ (ಆರ್ಪಿಐ) ಸಂತೋಷ ಬೋಜಪ್ಪಗೋಳ, ಸಿಎಆರ್ ಹೆಡ್ ಕಾನ್ಸ್ಟೇಬಲ್ಗಳಾದ ಮುತ್ತಪ್ಪ ಕಾಟನಾಯಕ, ನವೀನ ತೋಪಲಕಟ್ಟಿ, ಪೂರ್ವ ಸಂಚಾರ ಠಾಣೆಯ ಕಾನ್ಸ್ಟೇಬಲ್ ಬಸವಣ್ಯಪ್ಪ ಬಾವಿಹಾಳ ಅಮಾನತುಗೊಂಡವರು. ಸಿಎಆರ್‌ನ ನಿವೃತ್ತ ಹೆಡ್ ಕಾನ್ಸ್ಟೇಬಲ್ ಶ್ರೀಕಾಂತ ಕೂಡ ಸಿಕ್ಕಿಬಿದ್ದಿದ್ದರು.
ಅಕ್ಷಯ ಕಾಲೋನಿಯ ಎರಡನೇ ಹಂತದ 337 ಸಂಖ್ಯೆಯ ಬಾಡಿಗೆ ಮನೆಯ ಮೇಲೆ ಇಸ್ಪೀಟ್ ಆಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಪೊಲೀಸ್ ಆಯುಕ್ತರ ಸೂಚನೆಯಂತೆ ಗೋಕುಲ ರೋಡ್ ಠಾಣೆ ಇನ್‌ಸ್ಪೆಕ್ಟರ್ ಜೆ.ಎಂ ಕಾಲಿಮಿರ್ಚಿ ನೇತೃತ್ವದ ತಂಡ ದಾಳಿ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದರು.
ಇದನ್ನೂ ಓದಿ: ದಾವಣಗೆರೆ ಜನಸಂಪರ್ಕ ಕಚೇರಿ ಒಳಗಡೆ ನಿಲ್ಲಿಸಿದ್ದ ಕಾರಿನಲ್ಲಿ ಮಾರಕಾಸ್ತ್ರ ಪತ್ತೆ: ದೂರು ದಾಖಲು