ಹುಬ್ಬಳ್ಳಿ: ನಗರದಲ್ಲಿ ಡ್ರೈವರ್ ಮೇಲೆ ಪೊಲೀಸ್ ಅಧಿಕಾರಿ ಹಲ್ಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಎಸ್.ಐ ಸೇರಿ ನಾಲ್ವರು ಪೊಲೀಸರನ್ನು ಅಮಾನತು ಮಾಡಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಆದೇಶ ಹೊರಡಿಸಿದ್ದಾರೆ.

ವಾಹನ ಸ್ವಚ್ಛಗೊಳಿಸುವ ಸಮಯದಲ್ಲಿ ಶ್ರೀಶೈಲ್ ಹಾಗೂ ಮುದ್ದಪ್ಪ ಎಂಬುವರ ಮೇಲೆ ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿಯ ಮಂಜುನಾಥ ನಗರದಲ್ಲಿ ಹಲ್ಲೆ ನಡೆದಿತ್ತು ಎನ್ನಲಾಗ್ತಿದೆ.

ಸಶಸ್ತ್ರ ಮೀಸಲು ಪಡೆಯ ನಾಲ್ವರು ಸಿಬ್ಬಂದಿ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆ ಆರ್‌ಎಸ್‌ಐ ಪಿ.ರವಿಕುಮಾರ್ ಸೇರಿದಂತೆ ನಾಲ್ವರನ್ನು ಅಮಾನತು ಮಾಡಿ ಪೊಲೀಸ್ ಆಯುಕ್ತ ಲಾಬೂರಾಮ್ ಅವರು ಆದೇಶ ಹೊರಡಿಸಿದ್ದಾರೆ.
ಓದಿ: ಕ್ಷುಲ್ಲಕ ವಿಚಾರಕ್ಕೆ ಯುವಕರ ಮೇಲೆ ಆರ್‌ಎಸ್‌ಐ ಹಲ್ಲೆ!: ಹುಬ್ಬಳ್ಳಿ ಜನರ ಆಕ್ರೋಶ