ಹುಬ್ಬಳ್ಳಿ: ಪರಿಚಿತ ವ್ಯಕ್ತಿಯೊಬ್ಬರು ಮಹಿಳೆಯ ಬ್ಯಾಂಕ್ ಖಾತೆಯಿಂದ 46 ಸಾವಿರ ರೂ. ವರ್ಗಾವಣೆ ಮಾಡಿಕೊಂಡು ವಂಚಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ನಗರದ ವೀರಾಪುರ ಓಣಿಯ ಮಹಿಳೆಯ ಬ್ಯಾಂಕ್ ಆಫ್ ಬರೋಡಾ ಬ್ಯಾಂಕ್ ಖಾತೆಯಿಂದ ಮಾ.20 ರಂದು ಆನ್‌ಲೈನ್ ಮೂಲಕ 46 ಸಾವಿರ ರೂ. ಹಣವನ್ನು ಖಾತೆಗೆ ವರ್ಗಾಯಿಸಿಕೊಂಡಿದ್ದು, ಖಾತೆಯಲ್ಲಿನ ಹಣ ಪರಿಶೀಲಿಸುವಾಗ ಹಣ ವರ್ಗಾಯಿಸಿಕೊಂಡು ವಂಚಿಸಿರುವ ಪ್ರಕರಣ ಗೊತ್ತಾಗಿದೆ.
ಈ ಕುರಿತು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.