ETV Bharat / state

ಹೈವೋಲ್ಟೇಜ್ ಪಡೆದುಕೊಂಡ ಈದ್ಗಾ ವಿಚಾರ: ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಮನೆಯಲ್ಲಿ ಮಹತ್ವದ ಸಭೆ - union minister pralhad joshi

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವದ ವೇಳೆ ಕಾನೂನು ಸುವ್ಯವಸ್ಥೆ ಬಗ್ಗೆ ನಿಗಾವಹಿಸಲು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಮನೆಯಲ್ಲಿ ಮಹತ್ವದ ಸಭೆ

author img

By

Published : Aug 29, 2022, 4:20 PM IST

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸುವ ವಿಚಾರವಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮನೆಯಲ್ಲಿ ಮಹತ್ವದ ಸಭೆ ನಡೆಸಲಾಗುತ್ತಿದೆ. ಜನಪ್ರತಿನಿಧಿಗಳ ಹಾಗೂ ಪಾಲಿಕೆ ಚುನಾಯಿತ ಪ್ರತಿನಿಧಿಗಳ ದಂಡು ಕೇಂದ್ರ ಸಚಿವರ ಮನೆಯತ್ತ ಆಗಮಿಸುತ್ತಿದ್ದಾರೆ.

ಬಿಜೆಪಿ ಮತ್ತು ಸಂಘದ ಪ್ರಮುಖರು, ಅಧಿಕಾರಿಗಳು ಭಾಗಿಯಾಗಿದ್ದು, ಜಿಲ್ಲಾಧಿಕಾರಿ ಗುರುದತ್ ಹೆಗಡೆ, ಎಡಿಜಿಪಿ ಅಲೋಕ್ ಕುಮಾರ್, ಪೊಲೀಸ್ ಕಮಿಷನರ್ ಲಾಭೂರಾಮ್, ಪಾಲಿಕೆ ಕಮಿಷನರ್ ಡಾ. ಗೋಪಾಲಕೃಷ್ಣ, ಸದನ ಸಮಿತಿಯ ಐವರು ಹಾಗೂ ಕಾರ್ಪೋರೇಟರ್ಸ್​ ಸಹ ಸಭೆಯಲ್ಲಿ ಭಾಗಿಯಾಗಿದ್ದಾರೆ. ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸುವ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಹೆಚ್ಚಿದೆ.

ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಮನೆಯಲ್ಲಿ ಮಹತ್ವದ ಸಭೆ

ಮೂರು ದಿನದ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡುವ ಸಾಧ್ಯತೆ ಇದ್ದು, ಕಾನೂನು ಸುವ್ಯವಸ್ಥೆ ಬಗ್ಗೆ ನಿಗಾ ವಹಿಸಲು ಸಚಿವ ಪ್ರಹ್ಲಾದ್ ಜೋಶಿ ಸೂಚನೆ ನೀಡಿದ್ದು, ಮುಂದಿನ ನಿರ್ಧಾರದವರೆಗೆ ಕಾಯಬೇಕಿದೆ.

ಓದಿ: ಬಿಜೆಪಿಯವರೇ ನಿಮ್ಮ ಹತ್ತಿರ ಇದೆಯಾ ಉತ್ತರ?: ಕಾಂಗ್ರೆಸ್​​ನಿಂದ ಅಭಿಯಾನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.