ಹುಬ್ಬಳ್ಳಿ: ಕ್ಷುಲಕ ಕಾರಣಕ್ಕೆ ಮನನೊಂದ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಗೋಕುಲ ಗ್ರಾಮದಲ್ಲಿ ನಡೆದಿದೆ.
ಗಾಯತ್ರಿ (19) ನೇಣು ಹಾಕಿಕೊಂಡ ಯುವತಿ. ತಡರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಗಾಯತ್ರಿ ಕಂಬಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆ ಬಗ್ಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಘಟನೆ ಕುರಿತು ಗೋಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.