ಹುಬ್ಬಳ್ಳಿ: ಸೆ.28ರಂದು ನಗರದ ಗ್ಲಾಸ್ ಹೌಸ್ನ ಮಳೆ ನೀರು ಕೊಯ್ಲಿನ ಹೊಂಡಕ್ಕೆ ಬಿದ್ದು ಬಾಲಕಿ ಸಾವನ್ನಪ್ಪಿದ್ದಳು. ಈ ಘಟನೆ ನಡೆದು ಮೂರು ದಿನ ಕಳೆದರೂ ಬಾಲಕಿ ಕುಟುಂಬಕ್ಕೆ ಪರಿಹಾರ ನೀಡಿಲ್ಲ ಎಂದು ಕುಟುಂಬಸ್ಥರು ಹಾಗೂ ಸಮತಾ ಸೇನೆ ಸಂಘಟನೆ ಕಾರ್ಯಕರ್ತರು ಸ್ಮಾರ್ಟ್ ಸಿಟಿ ಕಚೇರಿ ಎದುರು ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿದರು.
ಘಟನೆ ವಿವರ ಪಡೆದುಕೊಂಡು ಬಾಲಕಿ ಕುಟುಂಬಕ್ಕೆ ಪರಿಹಾರ ನೀಡುವುದಾಗಿ ಹೇಳಿದ್ದ ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಇದುವರೆಗೂ ಯಾವುದೇ ಪರಿಹಾರ ನೀಡಿಲ್ಲವೆಂದು ಬಾಲಕಿಯ ತಂದೆ ಪರಶುರಾಮ ಯರಂಗಳಿ ಆರೋಪಿಸಿದರು.
ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಪರಿಹಾರ ನೀಡಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.