ಧಾರವಾಡ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಹಾಗೂ ಆಕೆಯ ಆತ್ಮಹತ್ಯೆಗೆ ಮೂಕ ಸಾಕ್ಷಿಯಾದ ತಾಲೂಕಿನ ಬೋಗೂರ ಗ್ರಾಮದಲ್ಲಿ ಮೌನ ಆವರಿಸಿದೆ. ರಾಜ್ಯಾದ್ಯಂತ ಅತ್ಯಾಚಾರಿಗೆ ಕಠಿಣ ಶಿಕ್ಷೆಯಾಗಬೇಕೆಂಬ ಆಂದೋಲನ ಶುರುವಾಗಿದೆ.
ಈ ಮಧ್ಯೆ ಮೃತ ಬಾಲಕಿಯ ಮನೆಗೆ ಇಂದು ಭೇಟಿ ನೀಡಿದ ಮಾಜಿ ಸಚಿವ ವಿನಯ್ ಕುಲಕರ್ಣಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ವೇಳೆ ವೈಯಕ್ತಿಕವಾಗಿ 20 ಸಾವಿರ ರೂ. ಪರಿಹಾರ ನೀಡಿದರು.
ಧಾರವಾಡ ಪೊಲೀಸ್ ಇಲಾಖೆ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಯನ್ನು ಕಠಿಣ ಶಿಕ್ಷೆಗೆ ಗುರಿ ಮಾಡಬೇಕು ಎಂದು ಆಗ್ರಹಿಸಿದರು.