ಹುಬ್ಬಳ್ಳಿ:ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕುರುಬ ಸಮಾಜದ ಕೊಡುಗೆ ದೊಡ್ಡದಿದೆ. ಹೀಗಾಗಿ ಹೆಚ್.ವಿಶ್ವನಾಥ್, ಎಂಟಿಬಿ ನಾಗರಾಜ್ ಹಾಗೂ ಆರ್.ಶಂಕರ್ ಅವರಿಗೆ ಅವಕಾಶ ನೀಡಬೇಕು ಎಂದು ರೇವಣಸಿದ್ದೇಶ್ವರ ಮಠದ ಶ್ರೀಬಸವರಾಜ ದೇವರು ಒತ್ತಾಯಿಸಿದ್ದಾರೆ.
ಕುರುಬ ಸಮಾಜದ ನಾಯಕರು ಬಿಜೆಪಿ ಸರ್ಕಾರ ಅಧಿಕಾರಕ್ಕೆ ತರಲು ಶ್ರಮಿಸಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸರಿಯಾಗಿ ನಡೆಸಿಕೊಳ್ಳಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಕುರುಬ ಸಮಾಜ ಬಿಜೆಪಿಗೆ ಪಾಠ ಕಲಿಸಲಿದೆ ಎಂಬ ಎಚ್ಚರಿಕೆ ಕೊಟ್ಟಿದ್ದಾರೆ.