ETV Bharat / state

ಸಂತ್ರಸ್ತರ ನೋವಿಗೆ ಸ್ಪಂದಿಸದ ಸರ್ಕಾರದ ವಿರುದ್ಧ ನಾಳೆಯಿಂದ ಪ್ರತಿಭಟನೆ: ಸಿದ್ದರಾಮಯ್ಯ ಘೋಷಣೆ

author img

By

Published : Oct 22, 2019, 3:56 PM IST

Updated : Oct 22, 2019, 4:04 PM IST

ಸರ್ಕಾರ ನೆರೆ ಸಂತ್ರಸ್ತರಿಗೆ ನೋವಿಗೆ ಸ್ಪಂದಿಸದ ಹಿನ್ನೆಲೆ ನಾಳೆಯಿಂದ ಪ್ರತಿಭಟನೆ ನಡೆಸುವುದಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹುಬ್ಬಳ್ಳಿಯಲ್ಲಿ ತಿಳಿಸಿದ್ದಾರೆ.

ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ

ಹುಬ್ಬಳ್ಳಿ: ಚುನಾವಣಾ ಸಮೀಕ್ಷೆಯಂತೆ ಮಹಾರಾಷ್ಟ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಲಾಗಿದೆ. ಆದರೆ, ಮಹಾರಾಷ್ಟ್ರದಲ್ಲಿ ಐದು ವರ್ಷಗಳ ಕಾಲ ಬಿಜೆಪಿ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ. ಹೀಗಾಗಿ ಬಿಜೆಪಿಗೆ ಜನ ಹೇಗೆ ಮತಹಾಕುತ್ತಾರೆ ಎಂದು ಪ್ರತಿ ಪಕ್ಷದ ನಾಯಕ ಸಿದ್ದರಾಮಯ್ಯ ‌ಪ್ರಶ್ನಿಸಿದರು.

ನಗರದ ವಿಮಾನ‌ ನಿಲ್ದಾಣದಲ್ಲಿ ‌ಮಾತನಾಡಿದ ಅವರು, ನಾನು ಚುನಾವಣಾ ಪ್ರಚಾರಕ್ಕೆ ಮಹಾರಾಷ್ಟ್ರಕ್ಕೆ ಹೋದ ಸಂದರ್ಭದಲ್ಲಿ ನೋಡಿದ್ದೇನೆ. ಅಲ್ಲಿನ ರಸ್ತೆಗಳು ಕೆಟ್ಟ ಪರಿಸ್ಥಿತಿಯಲ್ಲಿವೆ. ಅಷ್ಟೇನೂ ಹೇಳಿಕೊಳ್ಳುವಷ್ಟು ಅಭಿವೃದ್ಧಿಯೂ ಸಹ ಆಗಿಲ್ಲ ಎಂದರು. ಇನ್ನಿ ಇವಿಎಂ ದುರ್ಬಳಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು ಮಹಾರಾಷ್ಟ್ರದ ಚುನಾವಣೆಯಲ್ಲಿ ಬಿಜೆಪಿಯವರು ಮತಯಂತ್ರಗಳನ್ನ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ನನಗನಿಸುತ್ತದೆ ಎಂದ್ರು.

ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ

ಜನರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ:
ರಾಜ್ಯದಲ್ಲಿ ಮತ್ತೆ ಭಾರಿ ಮಳೆ ಹಾಗೂ ಪ್ರವಾಹದಿಂದಾಗಿ ಜನತೆ ತೀರಾ ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದೆ. ಮೂರನೇ ಬಾರಿ ಮಳೆಯಿಂದಾಗಿ ಜನತೆ ತತ್ತರಿಸಿದ್ದು, ಈ ಬಗ್ಗೆ ಸರ್ಕಾರ ಸೂಕ್ತ ಗಮನಹರಿಸುತ್ತಿಲ್ಲ ಎಂದು ಕಿಡಿಕಾರಿದರು. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಸಂತ್ರಸ್ತರಿಗೆ ಪರಿಹಾರ ಕೊಡುತ್ತೇನೆ ಎಂದು ಹೇಳಿದರು. ಆದರೆ, ಇದುವರೆಗೂ ಇದರ ಬಗ್ಗೆ ಯಾವುದೇ ಚಕಾರ ಎತ್ತಿಲ್ಲ. ಇಲ್ಲಿಯವರೆಗೆ ನಾವೂ ಸಹ ಕಾದು ನೋಡಿದೆವು. ಇದಕ್ಕೆ ಪ್ರತಿಕ್ರಿಯೆ ಬರದ ಹಿನ್ನೆಲೆಯಲ್ಲಿ ನಾವು ನಾಳೆ ಈ ಸಂಬಂಧ ಪ್ರತಿಭಟನೆ ಮಾಡಲಿದ್ದೇವೆ ಎಂದರು.

ಸಾವರ್ಕರ್ ವಿಚಾರ: ಸಾವರ್ಕರ್ ಅವರ ಬಗ್ಗೆ ನೀಡಿದ ಹೇಳಿಕೆಗೆ ನಾನು ಈಗಲೂ ಬದ್ಧನಾಗಿದ್ದೇನೆ. ಮಹಾತ್ಮ ಗಾಂಧೀಜಿ ಕೊಲೆಯಲ್ಲಿ ಅವರೂ ಒಬ್ಬ ಆರೋಪಿ. ಕೆಲವೊಂದು ಸಾಕ್ಷಾಧಾರಗಳ ಕೊರತೆ ಇದೆ. ಹಾಗಂತ ಅವರು ಆರೋಪಿಯೇ ಅಲ್ಲ ಎಂದು ಹೇಳೋಕೆ ಆಗುತ್ತಾ? ಎಂದರು. ಸಾವರ್ಕರ್ ಹಿಂದುತ್ವ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಕೆಲಸ ಮಾಡಿದ್ದಾರೆ. ಅಂತವರಿಗೆ ಭಾರತ ರತ್ನ ಕೊಡುವುದು ಬೇಡ. ಬದಲಾಗಿ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮಿಗಳಿಗೆ ಇಂತಹ ಪ್ರಶಸ್ತಿ ನೀಡುವುದು ಸೂಕ್ತ ಎಂದರು.

Intro:ಹುಬ್ಬಳ್ಳಿ-04

ಚುನಾವಣಾ ಸಮೀಕ್ಷೆಯಂತೆ ಮಹಾರಾಷ್ಟ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಐದು ವರ್ಷಗಳ ಕಾಲ ಬಿಜೆಪಿ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ.
ಹೀಗಾಗಿ ಬಿಜೆಪಿಗೆ ಜನ ಹೇಗೆ ಮತಹಾಕುತ್ತಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ‌ಪ್ರಶ್ನಿಸಿದರು.
ನಗರದ ವಿಮಾನ‌ ನಿಲ್ದಾಣದಲ್ಲಿ ‌ಮಾತನಾಡಿದ ಅವರು, ನಾನು ಚುನಾವಣಾ ಪ್ರಚಾರಕ್ಕೆ ಮಹಾರಾಷ್ಟ್ರಕ್ಕೆ ಹೋದ ಸಂದರ್ಭದಲ್ಲಿ ನೋಡಿದ್ದೇನೆ. ಅಲ್ಲಿನ ರಸ್ತೆಗಳು ಕೆಟ್ಟ ಪರಿಸ್ಥಿತಿಯಲ್ಲಿವೆ. ಅಷ್ಟೇನೂ ಹೇಳಿಕೊಳ್ಳುವಷ್ಟು ಅಭಿವೃದ್ಧಿಯೂ ಸಹ ಆಗಿಲ್ಲ ಎಂದರು. ಆದ್ದರಿಂದ ಜನ ಇಲ್ಲಿ ಬಿಜೆಪಿಗೆ ಹೇಗೆ ಮತ ನೀಡುತ್ತಾರೆ? ಫಲಿತಾಂಶ ಹೊರಬರಲಿ ಮುಂದೆ ಕಾದು ನೋಡೋಣ ಎಂದರು.
ಇವಿಎಂ ದುರ್ಬಳಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು ಮಹಾರಾಷ್ಟ್ರದ ಚುನಾವಣೆಯಲ್ಲಿ ಬಿಜೆಪಿಯವರು ಇವಿಎಂ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ನನಗನಿಸುತ್ತದೆ. 70 ದಿನಗಳ ಮೊದಲೇ ಚುನಾವಣೆ ಘೋಷಣೆ ಮಾಡಿರುವುದು ಇತಿಹಾಸದಲ್ಲೇ ನೋಡಿದ್ದೀರಾ ಎಂದು ಪ್ರಶ್ನಿಸಿದರು.

ಸಾವರ್ಕರ್ ವಿಚಾರ:
ಸಾವರ್ಕರ್ ಅವರ ಬಗ್ಗೆನೀಡಿದ ಹೇಳಿಕೆಗೆ ನಾನು ಈಗಲೂ ಬದ್ದನಾಗಿದ್ದೇನೆ. ಮಹಾತ್ಮಾ ಗಾಂಧೀಜಿ ಕೊಲೆಯಲ್ಲಿ ಅವರೂ ಒಬ್ಬ ಆರೋಪಿ. ಕೆಲವೊಂದು ಸಾಕ್ಷಾಧಾರಗಳ ಕೊರತೆ ಇದೆ. ಹಾಗಂತ ಅವರು ಆರೊಪಿನೇ ಅಲ್ಲ ಎಂದು ಹೇಳೋಕೆ ಆಗುತ್ತಾ? ಎಂದರು.
ಸಾವರ್ಕರ್ ಹಿಂದುತ್ವ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಕೆಲಸ ಮಾಡಿದ್ದಾರೆ. ಅಂತವರಿಗೆ ಭಾರತ ರತ್ನ ಕೊಡುವುದು ಬೇಡ. ಬದಲಾಗಿ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮಿಗಳಿಗೆ ಇಂತಹ ಪ್ರಶಸ್ತಿ ನೀಡುವುದು ಸೂಕ್ತ ಎಂದರು.

ಜನರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ..
ರಾಜ್ಯದಲ್ಲಿ ಮತ್ತೆ ಭಾರೀ ಮಳೆ ಹಾಗೂ ಪ್ರವಾಹದಿಂದಾಗಿ ಜನತೆ ತೀರ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಮೂರನೇ ಬಾರಿ ಮಳೆಯಿಂದಾಗಿ ಜನತೆ ತತ್ತಿರಿಸಿದ್ದು, ಈ ಬಗ್ಗೆ ಸರ್ಕಾರ ಸೂಕ್ತ ಗಮನಹರಿಸುತ್ತಿಲ್ಲ ಎಂದು ಕಿಡಿಕಾರಿದರು. ನೆರೆಯಿಂದಾಗಿ ರಾಜ್ಯದಲ್ಲಿ ಕೋಟ್ಯಾಂತರ ರೂ. ಹಾನಿ ಸಂಭವಿಸಿದೆ. ಆದರೆ ಇನ್ನೂ ಸಹ ಸೂಕ್ತ ಪರಿಹಾರ ಸಂತ್ರಸ್ತರಿಗೆ ಸಿಕ್ಕಿಲ್ಲ. ನೆರೆ ಪರಿಹಾರಕ್ಕೆ ನಾವು ಕೂಡ ಸಾಕಷ್ಟು ಹೋರಾಟ ಮಾಡಿದ್ದೇವೆ. ಆದರೆ ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಂತ್ರಸ್ತರಿಗೆ ಸಹಾಯ ಮಾಡಿಲ್ಲ. ಮಲಗಿರುವವರನ್ನು ಎಬ್ಬಿಸಬಹುದು. ಆದರೆ ಮಗಗಿರುವವರ ಹಾಗೆ ನಾಟಕ ಮಾಡುತ್ತಿರುವವರನ್ನು ಎಬ್ಬಸಲು ಸಾಧ್ಯವೇ? ಎಂದು ಪ್ರಶ್ನಿಸಿದರು.
ವಿಧಾನಸೌಧದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರು ಸಂತ್ರಸ್ತರಿಗೆ ಪರಿಹಾರ ಕೊಡುತ್ತೇನೆ ಎಂದು ಹೇಳಿದರು. ಆದರೆ ಇದುವರೆಗೂ ಇದರ ಬಗ್ಗೆ ಯಾವುದೇ ಚಕಾರವೆತ್ತಿಲ್ಲ. ಇಲ್ಲಿಯವರೆಗೂ ನಾವು ಸಹ ಕಾಯ್ದು ನೋಡಿದೆವು. ಇದಕ್ಕೆ ಪ್ರತಿಕ್ರಿಯೆ ಬರದ ಹಿನ್ನೆಲೆಯಲ್ಲಿ ನಾವು ನಾಳೆ ಈ ಸಂಬಂಧ ಪ್ರತಿಭಟನೆ ಮಾಡಲಿದ್ದೇವೆ ಎಂದರು.

ಬೈಟ್ - ಸಿದ್ದರಾಮಯ್ಯ, ವಿರೋಧ ಪಕ್ಷದ ನಾಯಕBody:H B GaddadConclusion:Etv hubli
Last Updated : Oct 22, 2019, 4:04 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.