ETV Bharat / state

ಕಂದಾಯ ದಾಖಲೆ ಮನೆ ಬಾಗಿಲಿಗೆ : ಧಾರವಾಡದಲ್ಲಿ ಮೊದಲ ಗಣನೀಯ ಸಾಧನೆ

ಧಾರವಾಡ ಜಿಲ್ಲೆಯಲ್ಲಿ 'ಕಂದಾಯ ದಾಖಲೆ ಮನೆ ಬಾಗಿಲಿಗೆ' ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಿನ್ನೆ ಸಂಜೆಯವರೆಗೆ ಜಿಲ್ಲೆಯ 22,903 ಕುಟುಂಬಗಳಿಗೆ ಕಂದಾಯ ದಾಖಲೆಗಳನ್ನು ತಲುಪಿಸಲಾಗಿದೆ..

ರೈತರಿಗೆ ಕಂದಾಯ ದಾಖಲೆಗಳನ್ನು ತಲುಪಿದ ಅಧಿಕಾರಿಗಳು

author img

By

Published : Mar 13, 2022, 7:36 AM IST

ಧಾರವಾಡ : ರಾಜ್ಯ ಸರ್ಕಾರದ ಕಂದಾಯ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ 'ಕಂದಾಯ ದಾಖಲೆ ಮನೆ ಬಾಗಿಲಿಗೆ' ಕಾರ್ಯಕ್ರಮಕ್ಕೆ ಜಿಲ್ಲೆಯಲ್ಲಿ ಅಭೂತಪೂರ್ವ ಜನಸ್ಪಂದನೆ ಸಿಕ್ಕಿದೆ.

ಜಿಲ್ಲೆಯ ಎಂಟು ತಾಲೂಕುಗಳ 14 ಹೋಬಳಿಗಳಲ್ಲಿ ಬೆಚಾರ (ಜನವಸತಿ ಇಲ್ಲದ) ಗ್ರಾಮಗಳು ಸೇರಿ ಒಟ್ಟು 407 ಗ್ರಾಮಗಳಿವೆ. ಜಿಲ್ಲೆಯ ಸುಮಾರು 1,52,394 ಕುಟುಂಬಗಳಿಗೆ ವಿವಿಧ ರೀತಿಯ ಕಂದಾಯ ದಾಖಲೆಗಳನ್ನು ಉಚಿತವಾಗಿ ಅವರ ಮನೆ ಬಾಗಿಲಿಗೆ ತಲುಪಿಸಲು ಜಿಲ್ಲಾಡಳಿತ ಕ್ರಮ ವಹಿಸಿದೆ.

ರೈತರಿಗೆ ಕಂದಾಯ ದಾಖಲೆಗಳನ್ನು ತಲುಪಿದ ಅಧಿಕಾರಿಗಳು
ರೈತರಿಗೆ ಕಂದಾಯ ದಾಖಲೆಗಳನ್ನು ತಲುಪಿಸಿದ ಅಧಿಕಾರಿಗಳು

ನಿನ್ನೆ ಬೆಳಗ್ಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮತ್ತು ಉಪ ವಿಭಾಗಾಧಿಕಾರಿ, ತಹಶೀಲ್ದಾರ್​, ಶಾಸಕರು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಜನಪ್ರತಿನಿಧಿಗಳು 'ಕಂದಾಯ ದಾಖಲೆ ಮನೆ ಬಾಗಿಲಿಗೆ' ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರತಿ ಗ್ರಾಮಗಳಲ್ಲಿ ಅಲ್ಲಿನ ಗ್ರಾಮ ಲೆಕ್ಕಾಧಿಕಾರಿಗಳು ಗ್ರಾಮ ಸಹಾಯಕರ ನೆರವಿನಿಂದ ಮನೆ ಮನೆಗೆ ಕಂದಾಯ ದಾಖಲೆಗಳನ್ನು ತಲುಪಿಸುತ್ತಿದ್ದಾರೆ.

ಕುಟುಂಬಗಳಿಗೆ ಸರ್ಕಾರವು ಉಚಿತವಾಗಿ ಅವರ ಪಹಣಿ ಪತ್ರಿಕೆ, ನಕ್ಷೆ, ಜಾತಿ ಮತ್ತು ಆದಾಯ ಪ್ರಮಾಣಪತ್ರವನ್ನು ನೀಡಲಾಗುತ್ತಿದೆ. ಗ್ರಾಮ ಲೆಕ್ಕಾಧಿಕಾರಿಗಳಿಗೆ ಹೆಚ್ಚುವರಿ ಜವಾಬ್ದಾರಿ ಇರುವುದರಿಂದ ಇಂದೂ ಸಹ ದಾಖಲೆಗಳನ್ನು ವಿತರಿಸಲಿದ್ದಾರೆ. ಮತ್ತು ಉಳಿದ ಕುಟುಂಬಗಳಿಗೂ ಸಹ ಕಂದಾಯ ದಾಖಲೆಗಳನ್ನು ಪೂರೈಸಲು ಕ್ರಮವಹಿಸಲಾಗಿದೆ.

ನಿನ್ನೆ ಸಂಜೆಯವರೆಗೆ ಜಿಲ್ಲೆಯ 22,903 ಕುಟುಂಬಗಳಿಗೆ ಕಂದಾಯ ದಾಖಲೆಗಳನ್ನು ತಲುಪಿಸಲಾಗಿದೆ. ಗ್ರಾಮಗಳಲ್ಲಿನ ರೈತರು ಸುಗ್ಗಿ ಸಮಯವಾಗಿರುವುದರಿಂದ ಹೆಚ್ಚಾಗಿ ತಮ್ಮ ಜಮೀನುಗಳಿಗೆ ಹೋಗಿ ಸಂಜೆ ಮರಳುತ್ತಾರೆ. ಆದ್ದರಿಂದ ಕಂದಾಯ ಇಲಾಖೆಯ ಅಧಿಕಾರಿಗಳು ಸಂಜೆ ರೈತರ ಮನೆಗಳಿಗೆ ಭೇಟಿ ನೀಡಿ, ಅವರ ಕಂದಾಯ ದಾಖಲೆಗಳನ್ನು ನೀಡಲಿದ್ದಾರೆ.

ಕಲಘಟಗಿ ತಾಲೂಕು : ಕಲಘಟಗಿ ತಾಲೂಕಿನ ಮಲಕನಕೊಪ್ಪ ಗ್ರಾಮದಲ್ಲಿ ಶಾಸಕ ಸಿ ಎಂ ನಿಂಬಣ್ಣವರ ಅವರು ಕಂದಾಯ ದಾಖಲೆ ಮನೆ ಬಾಗಿಲಿಗೆ ಕಾರ್ಯಕ್ರಮವನ್ನು ರೈತರಿಗೆ ಕಂದಾಯ ದಾಖಲೆಗಳನ್ನು ನೀಡುವ ಮೂಲಕ ಚಾಲನೆಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ರೈತರು ಸರ್ಕಾರದ ಈ ಯೋಜನೆಯನ್ನು ಬಳಸಿಕೊಂಡು ತಮ್ಮ ಪಹಣಿಗಳಲ್ಲಿ ವ್ಯತ್ಯಾಸಗಳಿದ್ದರೆ ಅಧಿಕಾರಿಗಳನ್ನು ಭೇಟಿ ಮಾಡಿ‌ ಸರಿಪಡಿಸಿಕೊಳ್ಳಬೇಕೆಂದು ತಿಳಿಸಿದರು.

ಜಿಲ್ಲಾಧಿಕಾರಿ ನಿತೇಶ್​ ಪಾಟೀಲ ಅವರು ಕಲಘಟಗಿ ಹೋಬಳಿಯ ದೇವಿಕ್ಕೊಪ್ಪ ಗ್ರಾಮಕ್ಕೆ ಭೇಟಿ ನೀಡಿ 10ಕ್ಕೂ ಹೆಚ್ಚು ಕುಟುಂಬದವರ ಮನೆಗಳಿಗೆ ತೆರಳಿ ಕಂದಾಯ ದಾಖಲೆಗಳನ್ನು ನೀಡಿದರು. ನಂತರ ಅವರು ನೆರೆದ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿ, ಕಂದಾಯ ಇಲಾಖೆಯು ಈಗ ಜನಕಲ್ಯಾಣ ಕಾರ್ಯಕ್ರಮಗಳಿಗೆ ಆದ್ಯತೆ ನೀಡುತ್ತಿದೆ ಎಂದರು.

ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮದಲ್ಲಿ ಮಾರ್ಚ್ 20, 2021ರ ಶನಿವಾರದಂದು ಆಯೋಜಿಸಿದ್ದ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಂದಾಯ ಸಚಿವರು, ಧಾರವಾಡ ಜಿಲ್ಲಾಡಳಿತವು ಸಾರ್ವಜನಿಕರ ಮನೆ ಬಾಗಿಲಿಗೆ ಸರ್ಕಾರಿ ಸೇವೆಗಳು ಎಂಬ ಕಾರ್ಯಕ್ರಮ ನೋಡಿ, ಮೆಚ್ಚುಗೆ ವ್ಯಕ್ತಪಡಿಸಿದ್ದರು.

ಈ ಕಾರ್ಯಕ್ರಮವನ್ನು ರಾಜ್ಯಾದ್ಯಂತ ವಿಸ್ತರಿಸಿದರೆ ರೈತರಿಗೆ, ಗ್ರಾಮೀಣ ಭಾಗದವರಿಗೆ ಹೆಚ್ಚು ಉಪಯುಕ್ತವಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದರು. ಅದರಂತೆ ವರ್ಷ ಕಳೆಯುವ ಮೊದಲೇ ಈ ಮಾದರಿಯ ಕಾರ್ಯಕ್ರಮವನ್ನು ರಾಜ್ಯಾದ್ಯಂತ ಅನುಷ್ಠಾನಗೊಳಿಸಲು ಮುಖ್ಯಮಂತ್ರಿಗಳು, ಕಂದಾಯ ಸಚಿವರು ಚಾಲನೆ ನೀಡಿದ್ದಾರೆ.

ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಉಳಿದ ಕುಟುಂಬಗಳಿಗೂ ಸರ್ಕಾರದ ನಿರ್ದೇಶನದ ಮೇರೆಗೆ ಕ್ರಮ ಕೈಗೊಳ್ಳಲಾಗುವುದು ಮತ್ತು ಬರುವ ಮಾರ್ಚ್ 21 ರಿಂದ 26ರವರೆಗೆ ಕಂದಾಯ ದಾಖಲೆಗಳನ್ನು ಪಡೆಯದಿರುವ ಕುಟುಂಬಗಳಿಗೂ ನಾಡ ಕಚೇರಿಯಿಂದ ಉಚಿತವಾಗಿ ವಿತರಿಸಲಾಗುವುದು ಎಂದು ಅವರು ಹೇಳಿದರು.

ಕಲಘಟಗಿ ತಾಲೂಕಿನ ಮೂರು ಹೋಬಳಿಯ 87 ಗ್ರಾಮಗಳಲ್ಲಿನ ಕುಟುಂಬಗಳಿಗೆ ಕಂದಾಯ ದಾಖಲೆಗಳನ್ನು ವಿತರಿಸಲಾಗುವುದು ಎಂದು ತಹಶೀಲ್ದರ್​ ಯಲ್ಲಪ್ಪ ಗೊಣೆನ್ನವರ ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.