ಹುಬ್ಬಳ್ಳಿ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಸರ್ಕಾರದಿಂದ ಯಾವುದೇ ಸೌಲಭ್ಯ ನೀಡದೆ ಅನ್ಯಾಯ ಮಾಡಲಾಗುತ್ತಿದೆ ಎಂದು ಹು-ಧಾ ಮಹಾನಗರ ಪಾಲಿಕೆ ಪೌರಕಾರ್ಮಿಕರ ಸಂಘದ ಗೌರವಾಧ್ಯಕ್ಷ ಗಂಗಾಧರ ಟಗರಗುಂಟಿ ಆರೋಪಿಸಿದರು.
ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಮಹಾಮಾರಿ ದೇಶಕ್ಕೆ ಕಾಲಿಟ್ಟ ಸಂದರ್ಭದಲ್ಲಿ ಕೂಡ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಪಿಂಚಣಿ, ನೇರ ನೇಮಕಾತಿ, ನೇರ ವೇತನ ಪಾವತಿ, ಸುರಕ್ಷತಾ ಸಲಕರಣೆ, ವಸತಿ ಸೇರಿದಂತೆ ಇನ್ನಿತರ ಸೇವಾ ಸೌಲಭ್ಯಕ್ಕಾಗಿ ಹೋರಾಟ ನಡೆಸುತ್ತಾ ಬಂದರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ. ಸರ್ಕಾರ ನಮ್ಮನ್ನು ತೀವ್ರವಾಗಿ ನಿರ್ಲಕ್ಷಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಕಳೆದ ಹಲವಾರು ವರ್ಷಗಳಿಂದ ಹೋರಾಟ ನಡೆಸುತ್ತಿದ್ದರೂ ಸಹ ಯಾವುದೇ ರೀತಿಯ ಕ್ರಮಗಳನ್ನು ಕೈಗೊಳ್ಳದೇ ಇರುವುದು ಪೌರಕಾರ್ಮಿಕರಿಗೆ ಜೀವನ ಭದ್ರತೆ ಇಲ್ಲದಂತಾಗಿದೆ. ಕೂಡಲೇ ಹು-ಧಾ ಮಹಾನಗರ ಪಾಲಿಕೆ ಅಧಿಕಾರಿಗಳು ಸೂಕ್ತ ಕ್ರಮಗಳನ್ನು ಜರುಗಿಸಬೇಕು ಎಂದು ಇದೇ ವೇಳೆ ಆಗ್ರಹಿಸಿದರು.