ಹುಬ್ಬಳ್ಳಿ: ಕೊರೊನಾ ವೈರಸ್ ತಡೆಗೆ ಸರ್ಕಾರ ದಿನಕ್ಕೊಂದು ಆದೇಶ ಹೊರಡಿಸುತ್ತಿದೆ. ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಿ ಯಶಸ್ವಿಯಾದ ಸರ್ಕಾರ, ಪದವಿ, ಸ್ನಾತಕೋತ್ತರ, ಡಿಪ್ಲೋಮಾ ವಿದ್ಯಾರ್ಥಿಗಳ ಪರೀಕ್ಷೆಯನ್ನು (ಅಂತಿಮ ವರ್ಷದ ವಿದ್ಯಾರ್ಥಿಗಳ ಪರೀಕ್ಷೆ ಹೊರತುಪಡಿಸಿ) ರದ್ದುಗೊಳಿಸಿದೆ.
ಆದರೆ, ಪ್ರತಿಷ್ಠಿತ ಕೆಎಲ್‌ಇ ಟೆಕ್ನಾಲಜಿಕಲ್ ವಿಶ್ವವಿದ್ಯಾಲಯ ಮಾತ್ರ ಸರ್ಕಾರದ ಆದೇಶಕ್ಕೂ ಕ್ಯಾರೆ ಎನ್ನದೇ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಆನ್ಲೈನ್ ಪರೀಕ್ಷೆ ನಡೆಸಲು ಮುಂದಾಗಿದೆ. ಈ ಮೂಲಕ ಸರ್ಕಾರದ ಆದೇಶವನ್ನು ಉಲ್ಲಂಘಿಸಿದೆ.
ಸರ್ಕಾರ ಏನೆ ಆದೇಶ ಹೊರಡಿಸಿದರೂ ಮಾಧ್ಯಮಗಳಲ್ಲಿ ಬರುವ ಸುದ್ದಿಗಳನ್ನು ಸಹ ನಂಬದೇ ವಿದ್ಯಾರ್ಥಿಗಳು ಪರೀಕ್ಷೆಗೆ ಸಜ್ಜಾಗಬೇಕೆಂದು ವಿದ್ಯಾರ್ಥಿಗಳಿಗೆ ಮೇಲ್ ಮೂಲಕ ಪರೀಕ್ಷಾ ಸಂದೇಶವನ್ನು ಕಳುಹಿಸುತ್ತಿರುವುದು ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.