ಹುಬ್ಬಳ್ಳಿ: ರಾಜ್ಯದಲ್ಲಿ ಪೆಟ್ರೋಲ್ ಮೇಲಿನ ತೆರಿಗೆ ಇಳಿಕೆ ಆರ್ಥಿಕತೆಯನ್ನು ಅವಲಂಬಿಸಿದ್ದು, ಉಪಚುನಾವಣೆ ನಂತರ ಆರ್ಥಿಕ ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮಗಳಿಗೆ ಈ ಕುರಿತು ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗಿದ್ದರೆ, ಪೆಟ್ರೋಲ್ ಮೇಲಿನ ತೆರಿಗೆ ಇಳಿಕೆಗೆ ಅವಕಾಶಗಳಿವೆ ಎಂದು ಹೇಳಿದ್ದಾರೆ.
ಸದ್ಯಕ್ಕೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 109.53ಕ್ಕೆ ಏರಿಕೆಯಾಗಿದ್ದು, ಪ್ರತಿ ಲೀಟರ್ ಡೀಸೆಲ್ ದರ 100.37 ರೂ. ಗೆ ಏರಿಕೆಯಾಗಿದೆ.
ಇದನ್ನೂ ಓದಿ: ಮತ್ತೆ ಇಂಧನ ದರ ಏರಿಕೆ: ಬೆಂಗಳೂರಿನಲ್ಲಿ ನೂರರ ಗಡಿ ದಾಟಿದ ಡೀಸೆಲ್ ಬೆಲೆ