ETV Bharat / state

ನಾಡೋಜ ಡಾ.ಚೆನ್ನವೀರ ಕಣವಿ ವೈದ್ಯಕೀಯ ವೆಚ್ಚ ಭರಿಸಲು ಜಿಲ್ಲಾಡಳಿತ ಕ್ರಮ - ಎಸ್​ಡಿಎಂ ಆಸ್ಪತ್ರೆಗೆ ದಾಖಲಾದ ಕಣವಿ

ಡಾ.ಕಣವಿ ಅವರು ಗುಣಮುಖರಾಗಿ ಮನೆಗೆ ಬರುವವರೆಗೂ ಅವರ ಎಲ್ಲ ವೈದ್ಯಕೀಯ ಚಿಕಿತ್ಸಾ ವೆಚ್ಚವನ್ನು ಸರ್ಕಾರದಿಂದ ಭರಿಸಲು ಕ್ರಮವಹಿಸಲಾಗಿದೆ. ಈ ಕುರಿತು ಜ.15 ರಂದೇ ಎಸ್​ಡಿಎಂ ಆಸ್ಪತ್ರೆಯ ಆಡಳಿತ ಮಂಡಳಿಗೆ ಹಾಗೂ ಡಾ.ಕಣವಿ ಅವರ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಚೆನ್ನವೀರ ಕಣವಿ
ಚೆನ್ನವೀರ ಕಣವಿ
author img

By

Published : Jan 19, 2022, 2:09 PM IST

ಧಾರವಾಡ: ನಾಡಿನ ಹೆಸರಾಂತ ಹಿರಿಯ ಕವಿ, ನಾಡೋಜ ಡಾ.ಚೆನ್ನವೀರ ಕಣವಿ ಅವರು ಜ.14 ರಂದು ಎಸ್​ಡಿಎಂ ಆಸ್ಪತ್ರೆಗೆ ದಾಖಲಾದ ಮಾಹಿತಿ ಬಂದ ಕೂಡಲೇ ಅವರ ಚಿಕಿತ್ಸೆಗೆ ಐಸಿಯು ಬೆಡ್ ಮೀಸಲಿರಿಸಿ, ಉತ್ತಮ ಚಿಕಿತ್ಸೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

ಡಾ.ಕಣವಿ ಗುಣಮುಖರಾಗಿ ಮನೆಗೆ ಬರುವವರೆಗೂ ಅವರ ಎಲ್ಲ ವೈದ್ಯಕೀಯ ಚಿಕಿತ್ಸಾ ವೆಚ್ಚವನ್ನು ಸರ್ಕಾರದಿಂದ ಭರಿಸಲು ಕ್ರಮವಹಿಸಿದೆ. ಈ ಕುರಿತು ಜ.15 ರಂದೇ ಎಸ್​ಡಿಎಂ ಆಸ್ಪತ್ರೆಯ ಆಡಳಿತ ಮಂಡಳಿಗೆ ಹಾಗೂ ಡಾ.ಕಣವಿ ಅವರ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಜಿಲ್ಲಾಡಳಿತ ಪ್ರಕಟಣೆ
ಜಿಲ್ಲಾಡಳಿತ ಪ್ರಕಟಣೆ

ಈ ಕುರಿತು ಜಿಲ್ಲಾಡಳಿತ ಪ್ರಕಟಣೆ ಹೊರಡಿಸಿದ್ದು, ಡಾ.ಚೆನ್ನವೀರ ಕಣವಿ ಅವರಿಗೆ ಉತ್ತಮ ಚಿಕಿತ್ಸೆ ನೀಡಲು ಸರ್ಕಾರದಿಂದ ಅಗತ್ಯ ವ್ಯವಸ್ಥೆ ಮಾಡಲಾಗಿದೆ. ಅವರ ಆರೋಗ್ಯದ ಕುರಿತು ಕಾಳಜಿ ವಹಿಸಿದ್ದು, ನಿತ್ಯ ಚಿಕಿತ್ಸೆ ನೀಡುತ್ತಿರುವ ವೈದ್ಯಕೀಯ ಅಧೀಕ್ಷಕರೊಂದಿಗೆ ಹಾಗೂ ಡಾ.ಕಣವಿ ಅವರ ಕುಟುಂಬದವರೊಂದಿಗೆ ಸಂಪರ್ಕದಲ್ಲಿದ್ದು, ಜಾಗೃತಿ ವಹಿಸಲಾಗಿದೆ ಎಂದು ತಿಳಿಸಲಾಗಿದೆ.

ರಾಜ್ಯ ಕಸಾಪ ಅಧ್ಯಕ್ಷರು ಡಾ.ಕಣವಿ ಅವರ ವೈದ್ಯಕೀಯ ವೆಚ್ಚ ಭರಿಸುವ ಕುರಿತು ಹೇಳಿಕೆ ನೀಡಿದ್ದು, ಸರ್ಕಾರದಿಂದಲೇ ಡಾ.ಕಣವಿ ಅವರ ಎಲ್ಲ ಚಿಕಿತ್ಸಾ ವೆಚ್ಚ ಭರಿಸಲು ಅವರು ಆಸ್ಪತ್ರೆಗೆ ದಾಖಲಾದ ದಿನದಿಂದಲೇ ಕ್ರಮವಹಿಸಲಾಗಿದೆ ಎಂದು ಜಿಲ್ಲಾಡಳಿದ ಪ್ರಕಟಣೆಯಲ್ಲಿ ತಿಳಿಸಿದೆ.

ಓದಿ: ಒಮಿಕ್ರಾನ್​ ಬಗ್ಗೆ ತಾತ್ಸಾರ ಬೇಡ.. ಮತ್ತೆ ಎಚ್ಚರಿಕೆ ನೀಡಿದ ವಿಶ್ವ ಆರೋಗ್ಯ ಸಂಸ್ಥೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.