ಧಾರವಾಡ:'ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ' ಕಾರ್ಯಕ್ರಮದ ನಿಮಿತ್ತ ಧಾರವಾಡ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಧಾರವಾಡ ತಾಲೂಕಿನ ಕಡೆಯ ಗ್ರಾಮ ವನಹಳ್ಳಿಯಲ್ಲಿ ಗ್ರಾಮ ವಾಸ್ತವ್ಯಕ್ಕೆ ಆಗಮಿಸಿದ್ದು, ಗ್ರಾಮಸ್ಥರು ಪೂರ್ಣಕುಂಭ ಸ್ವಾಗತ ನೀಡಿದರು.
ಎತ್ತಿನ ಚಕ್ಕಡಿ ಮೂಲಕ ಊರಿನ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಸಂಚರಿಸಿದರು. ಡೊಳ್ಳು ಕುಣಿತ, ಶಾಲಾ ಮಕ್ಕಳ ಪ್ರಭಾತಪೇರಿ ಮಾಡಿ ಅತ್ಯಂತ ವಿಜೃಂಭಣೆಯಿಂದ ಭರ್ಜರಿ ಸ್ವಾಗತ ಕೋರಿದರು.
![grand welcome for dharwad dc during dc village stay](https://etvbharatimages.akamaized.net/etvbharat/prod-images/kn-dwd-3-dc-gram-vastavya-welcome-avb-ka10001_16102021152925_1610f_1634378365_566.jpg)
ಇದನ್ನೂ ಓದಿ:COVID ವ್ಯಾಕ್ಸಿನ್ ನೀಡಲು ಬಂದವರಿಗೆ ಹಾವು ತೋರಿಸಿ ಹೆದರಿಸಿದ ಮಹಿಳೆ..ವಿಡಿಯೋ
ಮೆರವಣಿಗೆಯಲ್ಲಿ ಗ್ರಾಮಸ್ಥರು, ಮಕ್ಕಳು, ಮಹಿಳೆಯರು, ಸಂಘ, ಸಂಸ್ಥೆಗಳ ಪ್ರತಿನಿಧಿಗಳು, ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು ಭಾಗವಹಿಸಿದ್ದರು. ಮೆರವಣಿಗೆ ನಂತರ ವನಹಳ್ಳಿ ಸರ್ಕಾರಿ ಶಾಲಾ ಆವರಣದಲ್ಲಿ ಗ್ರಾಮ ವಾಸ್ತವ್ಯ ಸವಿ ನೆನಪಿಗಾಗಿ ಜಿಲ್ಲಾಧಿಕಾರಿಗಳು ಹಾಗೂ ಅತಿಥಿಗಳು ಸಸಿ ನೆಟ್ಟರು.