ಹುಬ್ಬಳ್ಳಿ: ನೈರುತ್ಯ ರೈಲ್ವೆ ಭದ್ರತಾ ಸಿಬ್ಬಂದಿ ಹಾಗೂ ರೈಲ್ವೆ ಸಿಬ್ಬಂದಿ ನಿರಾಶ್ರಿತರಿಗೆ ಆಹಾರ ಹಾಗೂ ದಿನಸಿ ಕಿಟ್ ವಿತರಣೆ ಮಾಡಿದರು.
ನಗರದ ರೈಲ್ ಸೌಧ ಹಾಗೂ ರೈಲ್ವೆ ನಿಲ್ದಾಣದಲ್ಲಿಂದು ರೈಲ್ವೆ ಅಧಿಕಾರಗಳ ನೇತೃತ್ವದಲ್ಲಿ ಆಹಾರ ವಿತರಣೆ ಮಾಡಲಾಯಿತು.
ಪ್ರತಿನಿತ್ಯ ಆಹಾರ ವಿತರಣೆ ಮಾಡುತ್ತಿರುವ ಸಿಬ್ಬಂದಿ ಕಾರ್ಯಕ್ಕೆ ನೈರುತ್ಯ ರೈಲ್ವೆ ವಲಯದ ವ್ಯವಸ್ಥಾಪಕ ನಿರ್ದೇಶಕ ಅಜಯಕುಮಾರ್ ಸಿಂಗ್, ಅರವಿಂದ ಮಾಲ್ಕಡೆ ಸೇರಿದಂತೆ ನೈರುತ್ಯ ರೈಲ್ವೆ ವಲಯದ ಅಧಿಕಾರಿಗಳು ಕೈ ಜೋಡಿಸಿದ್ದಾರೆ.