ಹುಬ್ಬಳ್ಳಿ: ಲಾಕ್ಡೌನ್ ನಡುವೆಯೂ ಪೊಲೀಸರ ಮೇಲೆ ಗುಂಪೊಂದು ಕಲ್ಲು ತೂರಾಟ ನಡೆಸಿರುವ ಘಟನೆ ಮಂಟೂರ್ ರೋಡ್ ಹತ್ತಿರದ ಅರಳಿಕಟ್ಟಿ ಕಾಲೋನಿ ಬಳಿ ನಡೆದಿದೆ.
ಘಟನೆಯ ದೃಶ್ಯಗಳನ್ನು ಸ್ಥಳೀಯರೊಬ್ಬರು ತಮ್ಮ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದಾರೆ. ಘಟನೆಯಲ್ಲಿ ಮೂವರು ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಸಂಬಂಧ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.