ಧಾರವಾಡ: ಅತಿಥಿ ಉಪನ್ಯಾಸಕರ ಬಾಕಿ ವೇತನ ಕೂಡಲೇ ಬಿಡುಗಡೆ ಮಾಡಿ ವಿಶೇಷ ಪರಿಹಾರ ಪ್ಯಾಕೇಜ್ ಘೋಷಿಸಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಕೊರೊನಾ ವೈರಸ್ ಅಟ್ಟಹಾಸದ ಹಿನ್ನೆಲೆ ಲಾಕ್ಡೌನ್ ಆಗಿದ್ದರಿಂದ ಸಮಸ್ಯೆಗಳು ಹೆಚ್ಚಿದ್ದಲ್ಲದೆ, 4-5 ತಿಂಗಳಿನಿಂದ ವೇತನ ಕೂಡಾ ನೀಡಿಲ್ಲ. ಈ ಕೂಡಲೇ ಸರ್ಕಾರ ಅತಿಥಿ ಉಪನ್ಯಾಸಕರಿಗೆ ವಿಶೇಷ ಅನುದಾನ ಘೋಷಿಸಬೇಕು ಎಂದು ಒತ್ತಾಯಿಸಿದರು.
ಅಲ್ಲದೆ ಶಿಕ್ಷಕರಿಗೆ ಸೇವಾ ಭದ್ರತೆ ಒದಗಿಸಿ ನೇಮಕಾತಿಯಲ್ಲಿ ಪ್ರಥಮ ಆದ್ಯತೆ ನೀಡಬೇಕು ಮತ್ತು ಬಾಕಿ ಇರುವ ಹಣವನ್ನು ಒಂದೇ ಬಾರಿಗೆ ಪಾವತಿಸಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.