ಹುಬ್ಬಳ್ಳಿ: ಕೊರೊನಾ ಹಾವಳಿಯಿಂದ ರಾಜ್ಯದಲ್ಲಿ ಅತಿಥಿ ಉಪನ್ಯಾಸಕರು ಹಾಗೂ ಶಿಕ್ಷಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ಅವರಿಗೆ ನೆರವು ನೀಡಬೇಕು ಎಂದು ಪಶ್ಚಿಮ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಆರ್.ಎಂ.ಕುಬೇರಪ್ಪ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲಾ ವಲಯಗಳಿಗೂ ರಾಜ್ಯ ಸರ್ಕಾರ ನೆರವು ನೀಡಿದೆ. ಆದರೆ ಅತಿಥಿ ಉಪನ್ಯಾಸಕರು, ಶಿಕ್ಷಕರು, ಗುತ್ತಿಗೆ ನೌಕರರಿಗೆ ಯಾವುದೇ ಸಹಾಯ ಮಾಡಿಲ್ಲ. ಕೂಡಲೇ ಅವರ ಕಷ್ಟಕ್ಕೆ ಸ್ಪಂದಿಸಬೇಕು ಎಂದು ಆಗ್ರಹಿಸಿದರು.
ಆನ್ಲೈನ್ ತರಗತಿ ನಡೆಸುವ ಸರ್ಕಾರದ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಅವರು, ಕೂಡಲೇ ಇದರಿಂದ ಹಿಂದೆ ಸರಿಯಬೇಕು. ಪ್ರಸಕ್ತ ವರ್ಷವನ್ನು ಶೂನ್ಯ ವರ್ಷ ಎಂದು ಘೋಷಿಸಬೇಕು ಎಂದು ಆಗ್ರಹಿಸಿದರು.