ಧಾರವಾಡ: ಧಾರವಾಡ: ಹಿರಿಯ ಸಂಶೋಧಕ ಎಂ.ಎಂ. ಕಲಬುರ್ಗಿ ಅವರ ಹತ್ಯೆ ಪ್ರಕರಣದ ವಿಚಾರಣೆ 3ನೇ ಜೆಎಂಎಫ್‌ಸಿ ನ್ಯಾಯಾಲಯದಿಂದ ಜಿಲ್ಲಾ ನ್ಯಾಯಾಲಯಕ್ಕೆ ವರ್ಗವಣೆಗೊಂಡಿದೆ.
ಧಾರವಾಡದ 3ನೇ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಮಂಗಳವಾರ ನಡೆದ ವಿಚಾರಣೆ ಬಳಿಕ ನ್ಯಾಯಾಧೀಶರು ಪ್ರಕರಣವನ್ನು ಜಿಲ್ಲಾ ನ್ಯಾಯಾಲಯಕ್ಕೆ ವರ್ಗಾಯಿಸಿ ಆದೇಶ ಹೊರಡಿಸಿದರು.
ಹುಬ್ಬಳ್ಳಿಯ ಗಣೇಶ ಮಿಸ್ಕೀನ್, ಅಮೀತ್ ಬದ್ದಿ, ಮಹಾರಾಷ್ಟ್ರದ ವಾಸುದೇವ ಸೂರ್ಯವಂಶಿ, ಶರತ್ ಬಾಹುಸಾಹೇಬ್ ಸಹಾಳ್ಕರ್, ಬೆಳಗಾವಿಯ ಪ್ರವೀಣ ಚತುರ, ಅಮೋಲ್ ಕಾಳೆಯನ್ನು ಪೊಲೀಸರು ಭದ್ರತೆಯಲ್ಲಿ ಕರೆತಂದು ನ್ಯಾಯಾಲಯಕ್ಕೆ ಮಂಗಳವಾರ ಹಾಜರುಪಡಿಸಿದ್ದರು.
ಅ. 24ಕ್ಕೆ ಪ್ರಕರಣದ ಎಲ್ಲಾ ಆರೋಪಿಗಳನ್ನು ಹಾಜರುಪಡಿಸುವಂತೆ ಪೊಲೀಸರಿಗೆ ನ್ಯಾಯಾಲಯ ಸೂಚನೆ ನೀಡಿದ್ದ ಹಿನ್ನೆಲೆಯಲ್ಲಿ ಮಂಗಳವಾರ ವಿಚಾರಣೆಗೆ ಕರೆತರಲಾಗಿತ್ತು.