ETV Bharat / state

ಅತಿವೃಷ್ಠಿ ಬಾಧಿತ ಪ್ರದೇಶಗಳಿಗೆ ಸಚಿವ ಹಾಲಪ್ಪ ಆಚಾರ್​ ಭೇಟಿ, ಪರಿಹಾರದ ಭರವಸೆ - ಈಟಿವಿ ಭಾರತ್​ ಕನ್ನಡ

ಮುಖ್ಯಮಂತ್ರಿ ಬದಲಾವಣೆ ಕುರಿತು ಪ್ರತಿಕ್ರಿಯಿಸಿದ ಸಚಿವ ಹಾಲಪ್ಪ ಆಚಾರ್​, ಸಿಎಂ ಅವರ ಅಭಿವೃದ್ಧಿ ಕಾರ್ಯಗಳನ್ನು ಸಹಿಸಲಾರದೇ ಕಾಂಗ್ರೆಸ್ ಪಕ್ಷ ಅಪಪ್ರಚಾರ ಮಾಡುತ್ತಿದೆ ಎಂದರು.

Kn_hbl_05_minister_visit_avb_7208089
ಸಚಿವ ಹಾಲಪ್ಪ ಆಚಾರ್
author img

By

Published : Aug 11, 2022, 8:19 PM IST

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಾದ್ಯಂತ ಕೆಲವು ದಿನಗಳಿಂದ ಸುರಿದ ಜೋರು ಮಳೆಗೆ ಬೆಳೆಗಳು ಸಂಪೂರ್ಣ ಹಾಳಾಗಿವೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಅತಿವೃಷ್ಟಿ ಬಾಧಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಕುರಿತು ಮಾತನಾಡಿದ ಅವರು, ಅನಿರೀಕ್ಷಿತ ಮಳೆಯಿಂದ ಕಾಳು ಕಟ್ಟುವ ಹಂತದಲ್ಲಿದ್ದ ಬೆಳೆ ಹಾನಿಯಾಗಿದೆ. ಜಿಲ್ಲೆಯಲ್ಲಿ 2.73 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿತ್ತು. ಈ ಪೈಕಿ 89,148 ಹೆಕ್ಟೇರ್ ಬೆಳೆ ಹಾನಿ ಸಂಭವಿಸಿದೆ. 61,566 ಹೆಕ್ಟೇರ್ ಪ್ರದೇಶದಲ್ಲಿ ಹೆಸರು ಬೆಳೆ ಹಾನಿಯಾಗಿದ್ದು, 916 ಹೆಕ್ಟೇರ್ ಉದ್ದು ಹಾನಿಯಾಗಿದೆ.

ಸಚಿವ ಹಾಲಪ್ಪ ಆಚಾರ್

ಈ ಕುರಿತು ಅಧಿಕಾರಿಗಳು ಸರ್ವೆ ರಿಪೋರ್ಟ್ ಸಿದ್ಧಪಡಿಸಿದ್ದಾರೆ. ಎನ್.ಡಿ.ಆರ್.ಎಫ್ ನಿಯಮಗಳ ಅನ್ವಯ ಪರಿಹಾರ ಕೊಡಲಾಗುವುದು. ಇದರೊಂದಿಗೆ ರಾಜ್ಯ ಸರ್ಕಾರದ ನೆರವೂ ಸೇರಿ ಪ್ರತಿ ಹೆಕ್ಟೇರ್​ಗೆ 13,600 ಪರಿಹಾರ ನೀಡಲಾಗುವುದು. ಬೆಳೆ ವಿಮೆ ಪರಿಹಾರಕ್ಕೂ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

ಸಿಎಂ ಬದಲಾವಣೆ ಕುರಿತು ಪ್ರತಿಕ್ರಿಯೆ: ರಾಜ್ಯದ ಮುಖ್ಯಮಂತ್ರಿ ಬದಲಾವಣೆ ಕುರಿತು ಕಾಂಗ್ರೆಸ್​ ಹೇಳಿಕೆಯನ್ನು ಖಂಡಿಸಿ ಮಾತನಾಡಿದ ಸಚಿವರು, ರಾಜ್ಯ ಬಿಜೆಪಿ ಸರ್ಕಾರ ಮುಖ್ಯಮಂತ್ರಿ ಬೊಮ್ಮಾಯಿ ಅವರ ನೇತೃತ್ವದಲ್ಲಿ ಪೂರ್ಣಾವಧಿ ಆಡಳಿತ ನಡೆಸಲಿದ್ದು, ಜನರ ಪ್ರೀತಿಗೆ ಪಾತ್ರವಾಗಲಿದೆ. ಬೊಮ್ಮಾಯಿ ಅವರು ರಾಜ್ಯದಲ್ಲಿ ಉತ್ತಮ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದ್ದಾರೆ. ಅವುಗಳನ್ನು ಸಹಿಸಲಾರದೇ ಕಾಂಗ್ರೆಸ್ ಪಕ್ಷ ಈ ರೀತಿ ಅಪಪ್ರಚಾರ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ: ಸಚಿವ ಅಶೋಕ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.