ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ಕುಲಸಚಿವರಾಗಿ ಹನುಮಂತಪ್ಪ ಅಧಿಕಾರ ಸ್ವೀಕರಿಸಿದರು. ಭಾರತೀಯ ಅರಣ್ಯ ಸೇವೆಯ ಸಂರಕ್ಷಣಾಧಿಕಾರಿ ಡಾ. ಕೆ.ಟಿ.ಹನುಮಂತಪ್ಪ ಅವರನ್ನು ಕುಲಸಚಿವರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಈ ಹಿಂದಿನ ಕುಲಸಚಿವ ಪ್ರೊ. ಸಿ.ಬಿ.ಹೊನ್ನು ಸಿದ್ದಾರ್ಥ ಅವರನ್ನು ಮರಳಿ ಬೆಂಗಳೂರು ವಿಶ್ವವಿದ್ಯಾಲಯಕ್ಕೆ ವರ್ಗಾವಣೆ ಮಾಡಲಾಗಿದ್ದು, ನೂತನ ಕುಲಸಚಿವರಾಗಿ ಹನುಮಂತಪ್ಪ ಅವರು ಕವಿವಿಯಲ್ಲಿ ಅಧಿಕಾರ ಸ್ವೀಕರಿಸಿದರು.