ETV Bharat / state

ಇಂದಿರಾ ಕ್ಯಾಂಟೀನ್​ಗಳಿಗೆ ಸಿಸಿಟಿವಿ ಕ್ಯಾಮರಾ ಅಳವಡಿಸಿದ ಹು-ಧಾ ಮಹಾನಗರ ಪಾಲಿಕೆ - ಹುಬ್ಬಳ್ಳಿ ಇಂದಿರಾ ಕ್ಯಾಂಟೀನ್

ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸುವ ಮೂಲಕ ನಗರದ ಇಂದಿರಾ ಕ್ಯಾಂಟೀನ್​ಗಳ ಮೇಲೆ ನಿಗಾ ಇಡಲು ಹು-ಧಾ ಮಹಾನಗರ ಪಾಲಿಕೆ ಮುಂದಾಗಿದೆ.

CCTV at Indira Canteen
ಇಂದಿರಾ ಕ್ಯಾಂಟೀನ್​ಗಳಿಗೆ ಸಿಸಿ ಕ್ಯಾಮರಾ ಅಳವಡಿಕೆ
author img

By

Published : Jun 5, 2021, 9:23 AM IST

ಹುಬ್ಬಳ್ಳಿ: ಹಸಿದವರ ಹೊಟ್ಟೆ ತುಂಬಿಸುವ ಇಂದಿರಾ ಕ್ಯಾಂಟಿನ್​ಗಳಿಗೆ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸುವ ಮೂಲಕ ವ್ಯವಸ್ಥಿತ ರೀತಿಯಲ್ಲಿ ನಿರ್ವಹಣೆ ಮಾಡಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮುಂದಾಗಿದೆ.

ಹು-ಧಾ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 9 ಇಂದಿರಾ ಕ್ಯಾಂಟಿನ್​ಗಳು ಕಾರ್ಯನಿರ್ವಹಿಸುತ್ತಿವೆ. ಲಾಕ್​​ಡೌನ್ ಅವಧಿಯಲ್ಲಿ ಸರ್ಕಾರದ ಆದೇಶದ ಮೇರೆಗೆ ಇಂದಿರಾ ಕ್ಯಾಂಟೀನ್​ಗಳಲ್ಲಿ ಉಚಿತವಾಗಿ ಆಹಾರ ವಿತರಿಸಲಾಗ್ತಿದೆ. ಕ್ಯಾಂಟೀನ್​ಗಳ ನಿರ್ವಹಣೆಗೆ ಸಂಬಂಧಪಟ್ಟಂತೆ ಸಾರ್ವಜನಿಕರಿಂದ ದೂರುಗಳು ಕೇಳಿ ಬಂದ ಹಿನ್ನೆಲೆ ನಿಗಾ ಇಡಲು ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದೆ.

ಇಂದಿರಾ ಕ್ಯಾಂಟೀನ್​ಗಳಿಗೆ ಸಿಸಿಟಿವಿ ಕ್ಯಾಮರಾ ಅಳವಡಿಕೆ

ಓದಿ : ಪೋಷಕರಿದ್ದರೂ ಇಲ್ಲದಂತಿದ್ದವರ ನೆರವಿಗೆ ಬಂತು ಮಕ್ಕಳ ಹಕ್ಕು ರಕ್ಷಣಾ ಇಲಾಖೆ

ಕ್ಯಾಮರಾ ಅಳವಡಿಸಿರುವುದರಿಂದ ಕ್ಯಾಂಟೀನ್​ನಲ್ಲಿ ಪ್ರತಿದಿನ ವಿತರಣೆಯಾಗುವ ಆಹಾರದ ಗುಣಮಟ್ಟ, ಸಿಬ್ಬಂದಿ ವರ್ತನೆ, ಸ್ವಚ್ಛತೆ, ಆಹಾರ ವಿತರಣಾ ವ್ಯವಸ್ಥೆ ಸೇರಿದಂತೆ ಎಲ್ಲಾ ಚಟುವಟಿಕೆಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಗಮನಿಸಲಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.