ETV Bharat / state

ಹು - ಧಾ ಮಹಾನಗರ ಪಾಲಿಕೆ ವತಿಯಿಂದ ಪೌರಕಾರ್ಮಿಕರ ಆರೋಗ್ಯ ತಪಾಸಣೆ - Health checks for civilian workers news

ನಗರ ಸ್ವಚ್ಛವಾಗಿಡುವಲ್ಲಿ ಪ್ರಮುಖ ಪಾತ್ರ ವಹಿಸುವ ಪೌರಕಾರ್ಮಿಕರ ಕುರಿತಾಗಿ ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆ ವಿಶೇಷ ಕಾಳಜಿ ವಹಿಸಿದೆ.

ಪೌರಕಾರ್ಮಿಕರ ಆರೋಗ್ಯ ತಪಾಸಣೆ
ಪೌರಕಾರ್ಮಿಕರ ಆರೋಗ್ಯ ತಪಾಸಣೆ
author img

By

Published : Apr 15, 2020, 8:28 PM IST

ಹುಬ್ಬಳ್ಳಿ: ಹು-ಧಾ ಪಾಲಿಕೆಯಲ್ಲಿ ಕರ್ತವ್ಯ ನಿರ್ವಹಿಸಿತ್ತಿರುವ 2,500 ಪೌರಕಾರ್ಮಿಕರಿಗೆ ಉಚಿತವಾಗಿ ಆರೋಗ್ಯ ತಪಾಸಣೆ ನಡೆಸಿ, ಕೋವಿಡ್-19 ಸುರಕ್ಷತಾ ಕ್ರಮಗಳ ಕುರಿತು ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳಲಾಗಿದೆ.

ಪೌರಕಾರ್ಮಿಕರ ಆರೋಗ್ಯ ತಪಾಸಣೆ

ನಗರದ ಪಾಲಿಕೆ ಆಸ್ಪತ್ರೆ ವತಿಯಿಂದ ನಿತ್ಯ ಬೆಳಗ್ಗೆ ದೇಹದ ಉಷ್ಣತೆ ಪರೀಕ್ಷಿಸಲಾಗುತ್ತದೆ. ಬಿಪಿ, ರಕ್ತ ಪರೀಕ್ಷೆ ನಡೆಸಿ ಸಾಮಾನ್ಯ ಕಾಯಿಲೆಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕರ್ತವ್ಯದ ವೇಳೆಯಲ್ಲಿ ವೈಯಕ್ತಿಕ ಶುಚಿತ್ವ ಕಾಪಾಡಿಕೊಳ್ಳುವುದು, ಸರಿಯಾಗಿ ಮಾಸ್ಕ್​​ ಹಾಕಿಕೊಳ್ಳುವುದು. ಸ್ಯಾನಿಟೈಸರ್ ಬಳಕೆಯ ಕುರಿತು ಪೌರಕಾರ್ಮಿಕರಿಗೆ ಅರಿವು ಮೂಡಿಸಲಾಗುತ್ತಿದೆ.

ಎರಡು - ಮೂರು ದಿನಗಳ ಕಾಲ ಮಹಾನಗರದ ಎಲ್ಲಾ ಪೌರಕಾರ್ಮಿಕರಿಗೆ ಆರೋಗ್ಯ ತಪಾಸಣೆ ಮಾಡಲಾಗುವುದು ಎಂದು ಪಾಲಿಕೆ ವೈದ್ಯಾಧಿಕಾರಿ ಡಾ. ಪ್ರಭು ಬಿರಾದಾರ ತಿಳಿಸಿದ್ದಾರೆ.

ಕೋವಿಡ್-19 ರೋಗಾಣು ಹರಡುತ್ತಿರುವ ಸಂದರ್ಭದಲ್ಲಿ ಪೌರಕಾರ್ಮಿಕರಿಗೆ ಹಲವು ಸಂಶಯಗಳು ಕಾಡುತ್ತಿದ್ದವು. ವೈದ್ಯಾಧಿಕಾರಿಗಳು ನಮ್ಮನ್ನು ತಪಾಸಣೆ ನಡೆಸಿ ಹಲವು ಮುಂಜಾಗ್ರತಾ ಕ್ರಮಗಳನ್ನು ತಿಳಿಸಿದ್ದಾರೆ. ರಕ್ತ ಹಾಗೂ ಬಿಪಿ ಪರೀಕ್ಷೆ ಮಾಡಿ ಸಣ್ಣ ಕಾಯಿಲೆಗಳಿಗೆ ಚಿಕಿತ್ಸೆ ನೀಡಿದ್ದಾರೆ ಎಂದು ಗುತ್ತಿಗೆ ಪೌರಕಾರ್ಮಿಕ ಆನಂದ ಬ್ರಹ್ಮಾವರ ಹೇಳಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.