ಧಾರವಾಡ: ಸಮಾನ ಕೆಲಸಕ್ಕೆ ಸಮಾನ ವೇತನಕ್ಕೆ ಆಗ್ರಹಿಸಿ ಆರೋಗ್ಯ ಇಲಾಖೆ ಹೊರ ಗುತ್ತಿಗೆ ಸಿಬ್ಬಂದಿ ಜಿಲ್ಲಾ ಆರೋಗ್ಯ ಇಲಾಖೆ ಎದುರು ಪ್ರತಿಭಟನೆ ನಡೆಸಿದರು.
ನಮಗೆ ಚಪ್ಪಾಳೆ ಬೇಡ, ವೇತನ ಬೇಕು. ವೇತನ ನೀಡುವವರೆಗೂ ಪ್ರತಿಭಟನೆ ನಡೆಸುವುದಾಗಿ ಸರ್ಕಾರಕ್ಕೆ ಎಚ್ಚರಿಸಿದರು. ಸಮಾನ ವೇತನ, ಸೇವಾ ಭದ್ರತೆ ಸೇರಿದಂತೆ ಗುತ್ತಿಗೆ ಮತ್ತು ಹೊರ ಗುತ್ತಿಗೆ ಸಿಬ್ಬಂದಿಯ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.